ಚನ್ನಪಟ್ಟಣ ಬದಲಾವಣೆಗೆ ಪಣತೊಟ್ಟಿದ್ದೇವೆ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಡಿಕೆ ಶಿವಕುಮಾರ್ ಹೇಳಿಕೆ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Sep 21, 2024 | 2:22 PM

ನಮ್ಮ ಇಡೀ ಸರ್ಕಾರ ಚನ್ನಪಟ್ಟಣದಲ್ಲಿ ಬದಲಾವಣೆ ತರಲು ಸಿದ್ಧವಾಗಿದೆ. ಕೇವಲ ರಾಜಕೀಯಕ್ಕಾಗಿ ಅಲ್ಲ, ಇಲ್ಲಿ ಬದಲಾವಣೆ ಮಾಡಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಅದನ್ನು ಮಾಡಲು ಹೊರಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಿಂದೆ ಮಾಡಲು ಆಗಿರಲಿಲ್ಲ, ಈಗ ನಮಗೆ ಅವಕಾಶ ಸಿಕ್ಕಿದೆ. ಈಗ ಜನಸೇವೆ ಮಾಡಲು ಹೊರಟಿದ್ದೇವೆ ಎಂದರು.

ರಾಮನಗರ, ಸೆಪ್ಟೆಂಬರ್ 21: ಚನ್ನಪಟ್ಟಣದಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಚನ್ನಪಟ್ಟಣದ ತಟ್ಟಕೆರೆಯ 12 ಎಕರೆ ಜಾಗದಲ್ಲಿ 9 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ತಟ್ಟಕೆರೆ ಬಡಾವಣೆ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಸಮೀಪದಲ್ಲಿ ಇದೆ. ಒಂದು ವರ್ಷ ಅವಧಿಯೊಳಗೆ ಕ್ರೀಡಾಂಗಣ ಪೂರ್ಣವಾಗಲಿದ್ದು, ಕ್ರೀಡಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ನಿರ್ಮಾಣ ಕಾರ್ಯ ಕೈಗೊಂಡಿವೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸಿ ಕುಮಾರಸ್ವಾಮಿ ಹಿಡಿತದಿಂದ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವ ಇರಾದೆಯಲ್ಲಿ ಅವರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ