ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಭೇಟಿ ಮಾಡಿದ್ದಾರೆ. ರಾಜಕೀಯ ವಿಚಾರವನ್ನು ಬಿಟ್ಟು ಆತ್ಮೀಯವಾಗಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ, ರಾಜಕೀಯ ವಿಚಾರವನ್ನು ಬಿಟ್ಟು ಆತ್ಮೀಯವಾಗಿ ಮಾತನಾಡಿದ್ದಾರೆ. ಆದರೆ 5 ಗ್ಯಾರಂಟಿ ಯೋಜನೆಗಳ ಜಾರಿ ಮುಂದಿಟ್ಟುಕೊಂಡು ಮತ್ತು ಬಿಬಿಎಂಪಿ ಚುನಾವಣೆಗಳ ನಡುವೆ ಪರಸ್ಪರ ರಾಜಕೀಯ ನಾಯಕರು ಭೇಟಿ ಮಾಡಿದ್ದು, ಸಾಮಾನ್ಯವಾಗಿ ಕುತೂಹಲ ಮೂಡಿಸಿದೆ. ಆದರೆ ಭೇಟಿ ಪ್ರಮುಖ ಉದ್ದೇಶ ತಿಳಿದುಬಂದಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.