ಆರ್​ಆರ್ ನಗರ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ದೇವಸ್ಥಾನದ ಜಾಗಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್

|

Updated on: Dec 30, 2024 | 5:56 PM

ಒತ್ತುವರಿ ಪೀಡೆ ಬೆಂಗಳೂರು ನಗರಕ್ಕೆ ಹೊಸದೇನೂ ಅಲ್ಲ, ದೇವಸ್ಥಾನ, ಆಶ್ರಮ, ಪಾರ್ಕ್ ಮತ್ತು ಇತರ ಸಾರ್ವಜನಿಕ ಉಪಯೋಗಕ್ಕೆ ಬರುವ ಸ್ಥಳಗಳನ್ನು ಅವ್ಯಾಹತವಾಗಿ ಒತ್ತುವರಿ ಮಾಡಿಕೊಳ್ಳುವ ಕಾನೂನುಬಾಹಿರ ಕೆಲಸ ಜಾರಿಯಲ್ಲಿದೆ. ಜನ ರಾಜಾಕಾಲುವೆಗಳನ್ನೂ ಬಿಡುತ್ತಿಲ್ಲ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಒತ್ತುವರಿಗಳನ್ನು ತೆರವು ಮಾಡಿಸುವ ಕಾರ್ಯಕ್ಕೆ ಮುಂದಾಗಬೇಕು.

ಬೆಂಗಳೂರು: ವಿಧಾನಸಭಾ ಕ್ಷೇತ್ರ ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲಗೆವಡೇರಹಳ್ಳಿಯಲ್ಲಿ ಕರುಮಾರಿಯಮ್ಮ ದೇವಸ್ಥಾನಕ್ಕೆ ಸೇರಿದ ಜಮೀನಲ್ಲಿ ಒತ್ತುವರಿಯಾಗಿದ್ದು ಅದನ್ನು ಪರಿಶೀಲಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಬಂಧಪಟ್ಟ ಅಧಿಕಾರಿಗಳೊಡನೆ ಸ್ಥಳಕ್ಕೆ ಭೇಟಿ ನೀಡಿದರು. ಕರುಮಾರಿಯಮ್ಮ ದೇವಸ್ಥಾನದ ಟ್ರಸ್ಟ್​ಗೆ 1.24 ಎಕರೆ ಜಮೀನು ಸರ್ಕಾರದಿಂದ ಮಂಜೂರಾಗಿದ್ದು ಅದರ ವಿವರಗಳನ್ನು ಜಿಲ್ಲಾಧಿಕಾರಿ ಜಿ ಜಗದೀಶ್ ಉಪ ಮುಖ್ಯಮಂತ್ರಿಗೆ ನೀಡಿದರು. ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಕಮಾರ್ ಅಧಿಕಾರಿಗಳಿಗೆ ಆದೇಶ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಾಂಧಿ ಭಾರತ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್