ಮಂಡ್ಯದ ಭೂವರಾಹನಾಥ ದೇವಾಲಯದಲ್ಲಿ ಪತ್ನಿ ಜೊತೆಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿಕೆಶಿ
ಪತ್ನಿ ಉಷಾ ಅವರ ಜೊತೆ ದೇವಸ್ಥಾನಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ 2 ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ ಅವರು, ಅಭಿಷೇಕ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಾನು ತಿಹಾರ್ ಜೈಲಿನಲ್ಲಿದ್ದಾಗ ನಮ್ಮ ಅತ್ತೆ, ಮಾವ ಈ ದೇವಾಲಯಕ್ಕೆ ಬಂದು 4 ಬಾರಿ ಪ್ರಾರ್ಥನೆ ಸಲ್ಲಿಸಿದ್ದರು. ನನ್ನ ಅನೇಕ ಗೆಳೆಯರು ಕೂಡ ಇಲ್ಲಿಗೆ ಭೇಟಿ ನೀಡು ಎಂದು ಹೇಳುತ್ತಲೇ ಇದ್ದರು. ಇಲ್ಲಿಗೆ ಭೇಟಿ ನೀಡಿದ ನಂತರ ನನಗೆ ಇದರ ಮಹಿಮೆ ಅರ್ಥವಾಯಿತು. ಇದೊಂದು ಅದ್ಭುತ, ಐತಿಹಾಸಿಕ ದೇವಾಲಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ, ನವೆಂಬರ್ 29: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಇಂದು ಮಂಡ್ಯ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವಾದ ಭೂವರಾಹನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಉಷಾ ಅವರ ಜೊತೆ ದೇವಸ್ಥಾನಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ 2 ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ. ಪೂಜೆಯ ಭಾಗವಾಗಿ ಹೋಮ ಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಿದ ಅವರು, ಅಭಿಷೇಕ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಾನು ತಿಹಾರ್ ಜೈಲಿನಲ್ಲಿದ್ದಾಗ ನಮ್ಮ ಅತ್ತೆ, ಮಾವ ಈ ದೇವಾಲಯಕ್ಕೆ ಬಂದು 4 ಬಾರಿ ಪ್ರಾರ್ಥನೆ ಸಲ್ಲಿಸಿದ್ದರು. ನನ್ನ ಅನೇಕ ಗೆಳೆಯರು ಕೂಡ ಇಲ್ಲಿಗೆ ಭೇಟಿ ನೀಡು ಎಂದು ಹೇಳುತ್ತಲೇ ಇದ್ದರು. ಇಲ್ಲಿಗೆ ಭೇಟಿ ನೀಡಿದ ನಂತರ ನನಗೆ ಇದರ ಮಹಿಮೆ ಅರ್ಥವಾಯಿತು. ಇದೊಂದು ಅದ್ಭುತ, ಐತಿಹಾಸಿಕ ದೇವಾಲಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 29, 2025 09:22 PM
