ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ ರೂ.ಗೆ ಹೆಚ್ಚಳವಾಗಿದೆ. ಡಿಸೆಂಬರ್ 26ರೊಳಗೆ ಈ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.
ದೆಹಲಿ, ಡಿಸೆಂಬರ್ 24: ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ ರೂ.ಗೆ ಹೆಚ್ಚಳವಾಗಿದೆ. ಡಿಸೆಂಬರ್ 26ರೊಳಗೆ ಈ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.
ಇದಲ್ಲದೆ, ಮೂರನೇ ಹಂತದ 3ಎ ಯೋಜನೆಯಡಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿಲೋಮೀಟರ್ ಉದ್ದದ 28 ನಿಲ್ದಾಣಗಳ ಮಾರ್ಗಕ್ಕೆ 28,405 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಬೆಂಗಳೂರು, ಬಿಡದಿ, ಮೈಸೂರು, ಕನಕಪುರ, ನೆಲಮಂಗಲ, ತುಮಕೂರು, ಏರ್ಪೋರ್ಟ್, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಕೋಲಾರದಂತಹ ಪಟ್ಟಣಗಳಿಗೆ ಆರ್ಆರ್‌ಟಿಎಸ್ ಡಿಪಿಆರ್ ಸಿದ್ಧಪಡಿಸಲು ಮನವಿ ಮಾಡಲಾಗಿದೆ. ಈ ಯೋಜನೆಗಳು ಬೆಂಗಳೂರಿನ ದಟ್ಟಣೆ ಕಡಿಮೆ ಮಾಡಿ, ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
