ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆ ಶಿವಕುಮಾರ್
ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿ, ನವೆಂಬರ್ 15: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ದೆಹಲಿಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, “ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ವಿಚಾರಕ್ಕೆ ಭೇಟಿಯಾಗಿದ್ದರು, ಏನು ಚರ್ಚೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ