ತಮ್ಮ ರಾಜಕೀಯ ಗುರು ಪುತ್ರಿಯ ನಾಮಪತ್ರ ಸಲ್ಲಿಕೆಗೆ ಓಡೋಡಿ ಬಂದ ಡಿಕೆ ಶಿವಕುಮಾರ್
ಶಿಮಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಸಿದರು. ಇನ್ನು ಗೀತಾ ಅವರ ನಾಮಪತ್ರ ಸಲ್ಲಿಕೆಗೆ ಹಾಜರಾಗಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಓಡೋಡಿ ಬಂದಿದ್ದಾರೆ.
ಶಿವಮೊಗ್ಗ, (ಏಪ್ರಿಲ್ 15): ಶಿವಮೊಗ್ಗ ಲೋಕಸಭಾ (Shivamogga Loksabha) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ನಾಮಪತ್ರ (Nomination) ಸಲ್ಲಿಸಿದರು. ಇಂದು (ಏಪ್ರಿಲ್ 15) ತಮ್ಮ ಅಪಾರ ಬೆಂಬಲರೊಂದಿಗೆ ಮೆರವಣಿಗೆ ಮೂಲಕ ತೆರಳಿ ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಇನ್ನು ಗೀತಾ ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರ್ಜೆಂಟ್ ಅರ್ಜೆಂಟ್ ಆಗಿ ಓಡೋಡಿ ಜಿಲ್ಲಾಧಿಕಾರಿ ಕಚೇರಿ ಆಗಮಿಸಿದರು. ಗೀತಾ ಶಿವರಾಜ್ ಕುಮಾರ್ ಅವರು ಡಿಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಬಂಗಾರಪ್ಪ ಪುತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಾಮಪತ್ರ ಸಲ್ಲಿಕೆ ವೇಳೆ ಇರಬೇಕೆಂದು ಡಿಕೆ ಶಿವಕುಮಾರ್ ಓಡೋಡಿ ಬಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ