ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಅವರು ಯಾವುದೇ ಧರ್ಮ ಅಥವಾ ಜಾತಿಯ ಪ್ರಭಾವಕ್ಕೆ ಒಳಗಾಗದೆ ಕಾನೂನು ಎಲ್ಲರಿಗೂ ಸಮ ಎಂದು ಒತ್ತಿ ಹೇಳಿದ್ದಾರೆ. ಸ್ವಾಮೀಜಿ ತಮ್ಮ ತಪ್ಪನ್ನು ಅರಿತು ಕ್ಷಮೆ ಕೇಳಿರುವುದನ್ನು ಅವರು ಸ್ವಾಗತಿಸಿದ್ದಾರೆ.
ಬೆಂಗಳೂರು, ನವೆಂಬರ್ 30: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು. ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲವೆಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಗಳು, ಜಾತಿಗಳು ಇದಕ್ಕೆಲ್ಲ ಪ್ರವೇಶ ಮಾಡಬಾರದು. ಮತದಾನ ಸಂವಿಧಾನದ ಹಕ್ಕು. ಅವರು ತಪ್ಪು ಅರಿತು ಕ್ಷಮೆಯಾಚಿಸಿದ್ದು ಬಹಳ ಸಂತೋಷ. ಆದರೆ ಇಲ್ಲಿ ಅಶೋಕ್ ಬೆಂಕಿ ಹಚ್ಚಿ ಬೀಡಿ ಸೇದಲು ಹೊರಟಿದ್ದಾರೆ. ಸ್ವಾಮೀಜಿಗಳನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ ಅಂದಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ಯಾರ ಹಕ್ಕಿನ ಬಗ್ಗೆಯೂ ಮಾತಾಡುವುದು ಸೂಕ್ತ ಅಲ್ಲ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.