ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​: ದುರಸ್ತಿಗೆ ಸೂಚನೆ

ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​: ದುರಸ್ತಿಗೆ ಸೂಚನೆ

Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Dec 01, 2023 | 9:52 PM

ಇಂದು ಸಿಟಿ ರೌಂಡ ಹಾಕಿರುವ ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರಿನ ಸೌತ್​ ಎಂಡ್​ ಸರ್ಕಲ್​ ಕಂದಾಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಎಸ್.ಪಿ.ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ್ದು, ರಸ್ತೆಯ ಸ್ಥಿತಿ‌ ನೋಡಿ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡುವಂತೆ ಡಿಕೆ ಶಿವಕುಮಾರ್​ ಸೂಚನೆ ನೀಡಿದ್ದಾರೆ. 

ಬೆಂಗಳೂರು, ಡಿಸೆಂಬರ್​​ 01: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಡಿಜಿಟೈಸೇಷನ್ ಹಾಗೂ ಇತರೆ ವಿಷಯಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಪರಿಶೀಲನೆ‌ ಮಾಡಿದ್ದು, ಸೌತ್ ಎಂಡ್ ಸರ್ಕಲ್​ನ‌ ಕಂದಾಯ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹಾಗೂ ಕಂದಾಯ ಮುನೀಶ್ ಮೌದ್ಗಿಲ್​ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಎಸ್.ಪಿ.ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ್ದು, ರಸ್ತೆಯ ಸ್ಥಿತಿ‌ ನೋಡಿ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡುವಂತೆ ಡಿಕೆ ಶಿವಕುಮಾರ್​ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.