ಡಿಕೆ ಶಿವಕುಮಾರ್ ಪ್ರಕಾರ ಜೆಡಿಎಸ್-ಬಿಜೆಪಿ ಮೈತ್ರಿ ಎರಡೂ ಪಕ್ಷಗಳಿಗೆ ಬ್ಯಾಕ್ ಫೈರ್ ಆಗಲಿದೆ!
ಜೆಡಿಎಸ್-ಬಿಜೆಪಿ ಮೈತ್ರಿಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಹಲವಾರು ನಾಯಕರು ಅಸಂತುಷ್ಟರಾಗಿದ್ದಾರೆ ಮತ್ತು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರು ಮತ್ತು ಚುನಾವಣೆಯಲ್ಲಿ ಸೋತವರು ಸೇರಿದಂತೆ ಹಲವಾರು ಜನ ತಮಗೆ ಫೋನ್ ಮಾಡಿ, ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಬೆಂಗಳೂರು: ರಾಜ್ಯಕ್ಕೆ ಮತ್ತಷ್ಟು ಉಪ ಮುಖ್ಯಮಂತ್ರಿಗಳು ಬೇಕು ಅಂತ ಎದ್ದಿದ್ದ ಕೂಗಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ತಾತ್ಕಾಲಿಕ ಬ್ರೇಕ್ ಹಾಕಿರುವದನ್ನು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಹೇಳಿದಾಗ ವಿಷಯದ ಬಗ್ಗೆ ಮಾತಾಡಲ್ಲ ಎಂದ ಅವರು ಜೆಡಿಎಸ್ ಮತ್ತು ಬಿಜೆಪಿ ವರಿಷ್ಠರಿಗೆ ಆಘಾತವುಂಟು ಮಾಡುವ ಸಂಗತಿಯೊಂದನ್ನು ಬಹಿರಂಗಪಡಿಸಿದರು. ನಗರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಗೆ (BJP-JDS alliance) ಸಂಬಂಧಿಸಿದಂತೆ ಎರಡೂ ಪಕ್ಷಗಳ ಹಲವಾರು ನಾಯಕರು ಅಸಂತುಷ್ಟರಾಗಿದ್ದಾರೆ ಮತ್ತು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರು ಮತ್ತು ಚುನಾವಣೆಯಲ್ಲಿ ಸೋತವರು ಸೇರಿದಂತೆ ಹಲವಾರು ಜನ ತಮಗೆ ಫೋನ್ ಮಾಡಿ, ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ ಎಂದ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರರೊಂದಿಗೆ ಈ ವಿಷಯವನ್ನು ಚರ್ಚಿಸುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ