AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಅಪ್ಡೇಟ್​ಗಳನ್ನು ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಅಪ್ಡೇಟ್​ಗಳನ್ನು ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 24, 2025 | 7:50 PM

Share

ಕಾವೇರಿ ನದಿಯು ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲೂ ಹರಿದು ಹೋಗುವುದರಿಂದ ಈ ರಾಜ್ಯಗಳ ಜನ ಸಹ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ, ಸುಮಾರು 10,000 ಜನ ಕೂತು ವೀಕ್ಷಿಸಲು ಸಾಧ್ಯವಾಗುವ ಹಾಗೆ ಗ್ಯಾಲರಿಯನ್ನು ವಿನ್ಯಾಸಗೊಳಿಸಲಾಗುತ್ತಿದೆ, ಭಾವೈಕ್ಯತೆಯ ಹಾಡೊಂದನ್ನು ರಚಿಸಲು ಅರ್ಜುನ್ ಜನ್ಯಾ ಮತ್ತು ಹಂಸಲೇಖಾ ಅವರನ್ನು ಕೋರಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮೇ 24: ಕಾವೇರಿ ಆರತಿಗೆ (Cauvery Aarathi) ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆಯೊಂದನ್ನು ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತಾಡಿ, ರಾಜ್ಯದ ಮಠಮಾನ್ಯಗಳು, ವಿದ್ವಾಂಸರನ್ನು ಒಳಗೊಂಡಂತೆ, ಕರ್ನಾಟಕದ ಇತಿಹಾಸ, ನಾಡು-ನುಡಿ, ಪರಂಪರೆ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮವನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು. ಗಂಗಾ ಆರತಿ ಮಾದರಿಯ ಕಾವೇರಿ ಆರತಿ ಕಾರ್ಯಕ್ರಮಕ್ಕಾಗಿ ಕಾವೇರಿ ನಿಗಮದಿಂದ ₹92 ಕೋಟಿ ತೆಗೆದಿರಿಸಲಾಗಿದೆ , ಇಂಧನ, ಪ್ರವಾಸೋದ್ಯಮ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಕೂಡ ನಮ್ಮ ಜೊತೆ ಕೈ ಜೋಡಿಸುತ್ತಿವೆ ಎಂದು ಶಿವಕುಮಾರ್ ಹೇಳಿದರು. ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ:  ಅವರ ಜಮೀನುಗಳಿಗೆ ಬೆಲೆ ಏರಬಹುದು: ರಾಮನಗರ ಹೆಸರು ಬದಲಾವಣೆಗೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More