ಐಪಿಎಲ್ ಫೈನಲ್: ಅರ್​ಸಿಬಿ ಜೆರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿ ಕಪ್ ತೆಗೆದುಕೊಂಡು ಬನ್ನಿ ಎಂದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 03, 2025 | 11:25 AM

ನಿನ್ನೆಯೂ ಸಭೆಯೊಂದನ್ನು ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ್ದ ಡಿಕೆ ಶಿವಕುಮಾರ್ ಆರ್​ಸಿಬಿ ತಂಡಕ್ಕೆ ಶುಭ ಹಾರೈಸಿದ್ದರು. ಡಿಸಿಎಂ ಹೇಳಿದ ಹಾಗೆ ಅರ್​ಸಿಬಿ ತಂಡಕ್ಕೆ ಭಾರತ ಮಾತ್ರವಲ್ಲ ವಿಶ್ವಾದಾದ್ಯಂತ ಅಭಿಮಾನಿಗಳಿದ್ದಾರೆ. ಟೀಮಿನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್ ಸೀಸನ್ ಆಡುತ್ತಾರೋ ಇಲ್ಲವೋ ಗೊತ್ತಿಲ್ಲ, ಹಾಗಾಗಿ ಈ ಸಲ ಟಾಟಾ ಐಪಿಎಲ್ ಕಪ್ ಬೆಂಗಳೂರು ತಂಡ ಗೆಲ್ಲಲೇಬೇಕಿದೆ.

ಬೆಂಗಳೂರು, ಜೂನ್ 3: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCN DK Shivakumar) ಕ್ರಿಕೆಟ್ ಪ್ರೇಮಿ ಮತ್ತು ಕಾಲೇಜು ದಿನಗಳಲ್ಲಿ ಆಟ ಆಡಿದ್ದೂ ಉಂಟು. ಅವರು ಆರ್​ಸಿಬಿ ಟೀಮಿನ ದೊಡ್ಡ ಅಭಿಮಾನಿಯೂ ಹೌದು. ಇವತ್ತು ಬೆಂಗಳೂರಿನ ತಂಡ ಐಪಿಎಲ್ 18ನೇ ಸೀಸನ್​ನ ಫೈನಲ್ ಆಡಲಿರುವ ಸಂದರ್ಭದಲ್ಲಿ ಶಿವಕುಮಾರ್ ಟೀಮಿಗೆ ಶುಭ ಹಾರೈಸಿದ್ದಾರೆ. ಆಟಗಾರರನ್ನು ಹುರಿದುಂಬಿಸಲು ಅವರು ಅರ್​ಸಿಬಿ ಜೆರ್ಸಿ ತೊಟ್ಟಿರುವುದು ವಿಶೇಷ. ಕಳೆದ 18 ವರ್ಷಗಳಿಂದ ಆರ್​​ಸಿಬಿ ತಂಡ ಐಪಿಎಲ್ ಚಾಂಪಿಯನ್​ಶಿಪ್ ಗೆಲ್ಲಲಿ ಅಂತ ಹಾರೈಸುತ್ತಿದ್ದೇವೆ, ಇವತ್ತು ಮತ್ತೊಂದು ಅವಕಾಶ, ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಶಿವಕುಮಾರ್ ಟೀಮಿಗೆ ಸಾಮಾಜಿಕ ಜಾಲತಾಣವೊಂದರ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:  Virat Kohli Retirement: ಶಾಕಿಂಗ್: ಇಂದು ಆರ್​ಸಿಬಿ ಟ್ರೋಫಿ ಗೆದ್ದರೆ ಐಪಿಎಲ್​ಗೂ ವಿರಾಟ್ ಕೊಹ್ಲಿ ನಿವೃತ್ತಿ?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.