ಡಿಕೆ ಶಿವಕುಮಾರ್ ಕೆಆರ್ಎಸ್ ರೌಂಡ್ಸ್: ಕಾವೇರಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ
ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿದರು. ಕಾವೇರಿ ಅಮ್ಯೂಸ್ಮೆಂಟ್ ಪಾರ್ಕ್ ಸೇರಿದಂತೆ ಸರ್ಕಾರವು ಕೆಆರ್ಎಸ್ ಡ್ಯಾಂನಲ್ಲಿ ಹಮ್ಮಿಕೊಂಡಿರುವ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮಂಡ್ಯ, ಆಗಸ್ಟ್ 9: ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶಕ್ಕೆ ತೆರಳುವುದಕ್ಕೂ ಮುನ್ನವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಶುಕ್ರವಾರ ಭೇಟಿ ನೀಡಿದರು. ಕಾವೇರಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು. ಕೆಆರ್ಎಸ್ ಡ್ಯಾಂ ಮೇಲೆ ಎಲೆಕ್ಟ್ರಿಕ್ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.
ಬೃಂದಾವನ ಗಾರ್ಡನ್, ನೃತ್ಯ ಕಾರಂಜಿ ಸೇರಿ ಹಲವೆಡೆ ಡಿಸಿಎಂ ಪರಿಶೀಲನೆ ನಡೆಸಿದರು. ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಡಿಸಿ ಡಾ.ಕುಮಾರ, ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.
ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಎರಡು ವಾರಗಳ ಹಿಂದಷ್ಟೇ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್, ಗಂಗಾರತಿ ಮಾದರಿಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುವುದು. ಕಾವೇರಿ ಬೃಂದಾವನ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗಲಿದೆ ಎಂದು ತಿಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಪ್ರಜ್ವಲ್ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
