ಡಿಕೆ ಶಿವಕುಮಾರ್ ಕೆಆರ್​ಎಸ್ ರೌಂಡ್ಸ್: ಕಾವೇರಿ ಅಮ್ಯೂಸ್​ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ

| Updated By: Ganapathi Sharma

Updated on: Aug 09, 2024 | 11:17 AM

ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂಗೆ ಭೇಟಿ ನೀಡಿದರು. ಕಾವೇರಿ ಅಮ್ಯೂಸ್​ಮೆಂಟ್ ಪಾರ್ಕ್ ಸೇರಿದಂತೆ ಸರ್ಕಾರವು ಕೆಆರ್​ಎಸ್​ ಡ್ಯಾಂನಲ್ಲಿ ಹಮ್ಮಿಕೊಂಡಿರುವ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮಂಡ್ಯ, ಆಗಸ್ಟ್ 9: ಮೈಸೂರಿನಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶಕ್ಕೆ ತೆರಳುವುದಕ್ಕೂ ಮುನ್ನವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂಗೆ ಶುಕ್ರವಾರ ಭೇಟಿ ನೀಡಿದರು. ಕಾವೇರಿ ಅಮ್ಯೂಸ್​ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು. ಕೆಆರ್​ಎಸ್ ಡ್ಯಾಂ ಮೇಲೆ ಎಲೆಕ್ಟ್ರಿಕ್ ವಾಹನದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.

ಬೃಂದಾವನ ಗಾರ್ಡನ್, ನೃತ್ಯ ಕಾರಂಜಿ ಸೇರಿ ಹಲವೆಡೆ ಡಿಸಿಎಂ ಪರಿಶೀಲನೆ ನಡೆಸಿದರು. ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಡಿಸಿ ಡಾ.ಕುಮಾರ, ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಇದನ್ನೂ ಓದಿ: ಗಂಗಾರತಿ‌ ಮಾದರಿಯಲ್ಲಿ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಎರಡು ವಾರಗಳ ಹಿಂದಷ್ಟೇ ಕೆಆರ್​ಎಸ್ ಡ್ಯಾಂಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್, ಗಂಗಾರತಿ‌ ಮಾದರಿಯಲ್ಲಿ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುವುದು. ಕಾವೇರಿ ಬೃಂದಾವನ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗಲಿದೆ ಎಂದು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ