Mysuru Suttur Math: ಮೈಸೂರು ಸುತ್ತೂರು ಮಠದ ಗದ್ದುಗೆ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
Mysuru Suttur Math: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುತ್ತೂರು ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಭಾಗವಹಿಸಿ ಸುತ್ತೂರು ಮಠದ ಗದ್ದುಗೆ ದರ್ಶನ ಪಡೆದಕೊಂಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ವೇದಿಕೆಗೆ ಆಗಮಿಸುತ್ತಿದ್ದಂತೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲಾಗಿದೆ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಮೈಸೂರು, ಫೆಬ್ರವರಿ 10: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುತ್ತೂರು ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು ಭಾಗವಹಿಸಿ ಸುತ್ತೂರು ಮಠದ ಗದ್ದುಗೆ ದರ್ಶನ ಪಡೆದಕೊಂಡಿದ್ದಾರೆ. ಉಪ ಮುಖ್ಯಮಂತ್ರಿಯನ್ನು ಸುತ್ತೂರು ದೇಶೀಕೇಂದ್ರ ಸ್ವಾಮೀಜಿಗಳು ಬರಮಾಡಿಕೊಂಡರು. ಇತ್ತ ಡಿಕೆ ಶಿವಕುಮಾರ್ ವೇದಿಕೆಗೆ ಆಗಮಿಸುತ್ತಿದ್ದಂತೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲಾಗಿದೆ. ಸಿರಿಗೆರೆ ಮಠದ ಶಿವಮುರ್ತಿ ಶಿವಾಚಾರ್ಯಶ್ರೀ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ದರ್ಶನ್ ಧ್ರುವನಾರಾಯಣ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದು, ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos