ಬೆಳ್ಳಂಬೆಳಗ್ಗೆ ಬಿಜೆಪಿ MLC ಮನೆಗೆ ಡಿಕೆಶಿ ಭೇಟಿ: ಅತಿಥಿ ಸತ್ಕಾರ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ನಿವಾಸಕ್ಕೆ ಭೇಟಿ ನೀಡಿದ್ದು ಅಚ್ಚರಿ ಮೂಡಿಸಿದೆ. ಈಗಾಗಲೇ ಬಿಜೆಪಿ ವಿಧಾನರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್, ಇಂದು (ಏಪ್ರಿಲ್ 07) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಂಜುಂಡಿ ಮನೆಗೆ ಭೇಟಿ ನೀಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಬೆಳ್ಳಂಬೆಳಗ್ಗೆ ಬಿಜೆಪಿ MLC ಮನೆಗೆ ಡಿಕೆಶಿ ಭೇಟಿ: ಅತಿಥಿ ಸತ್ಕಾರ, ರಾಜ್ಯ ರಾಜಕಾರಣದಲ್ಲಿ ಸಂಚಲನ
|

Updated on: Apr 07, 2024 | 11:10 AM

ಬೆಂಗಳೂರು, (ಏಪ್ರಿಲ್ 07): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಸಹ ತಮ್ಮ ಅಭ್ಯರ್ಥಿ ಗೆಲುವಿಗಾಗಿ ಇನ್ನಿಲ್ಲದ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಇನ್ನು ಇದರ ಮಧ್ಯೆ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತ ಪಕ್ಷಾಂತರ ನಡೆಸಿದ್ದಾರೆ. ಇವೆಲ್ಲದರ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar ) ಅವರು ಬಿಜೆಪಿ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ (BJP MLC KP Nanjundi ) ನಿವಾಸಕ್ಕೆ ಭೇಟಿ ನೀಡಿದ್ದು ಅಚ್ಚರಿ ಮೂಡಿಸಿದೆ. ಈಗಾಗಲೇ ಬಿಜೆಪಿಯ ವಿಧಾನರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್, ಇಂದು (ಏಪ್ರಿಲ್ 07) ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಂಜುಂಡಿ ಮನೆಗೆ ಭೇಟಿ ನೀಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರಿಗೆ ನಂಜುಂಡಿ ಸಹ ಭರ್ಜರಿಯಾಗಿ ಬರಮಾಡಿಕೊಂಡಿದ್ದಾರೆ. ಅಲ್ಲದೇ ಜೊತೆ-ಜೊತೆಯಾಗಿ ಉಪಹಾರ ಸೇವಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಚುನಾವಣೆ ಹೊತ್ತಲ್ಲೇ ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಚರ್ಚೆಗಳು ಶುರುವಾಗಿವೆ.

Follow us