Ramanagara: ಕನಕಪುರದಲ್ಲಿ ಕರ್ನಾಟಕ ವನ್ ಕೇಂದ್ರಕ್ಕೆ ಭೇಟಿ ನೀಡಿ ಗೃಹ ಲಕ್ಷ್ಮಿ ಯೋಜನೆ ಅರ್ಜಿ ನೋಂದಣಿ ಪ್ರಕ್ರಿಯೆ ಪರಿಶೀಲಿಸಿದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2023 | 10:41 AM

ಖುದ್ದು ಉಪ ಮುಖ್ಯಮಂತ್ರಿಯೇ ಸರ್ಕಾರದ ಯೋಜನೆಯೊಂದರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಖುದ್ದಾಗಿ ಅದೂ ರಜಾದಿನ ವೀಕ್ಷಿಸುವುದು ಅಭಿನಂದನಾರ್ಹ.

ರಾಮನಗರ: ಬೇರೆ ಸಚಿವರ ವಿಷಯ ಹೇಗೋ ಏನೋ ಗೊತ್ತಿಲ್ಲ ಮಾರಾಯ್ರೇ, ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ತಮ್ಮ ಜವಾಬ್ದಾರಿಗಳ ಬಗ್ಗೆ ಸೀರಿಯಸ್ ಆಗಿದ್ದಾರೆ. ಈ ವಿಡಿಯೋ ನೋಡಿದರೆ ನಿಮಗೆ ಯಾಕೆ ಅನ್ನೋದು ಗೊತ್ತಾಗುತ್ತದೆ. ಇವತ್ತು ಶನಿವಾರ ಮತ್ತು ರಜಾ ದಿನ (holiday). ಆದರೆ ಶಿವಕುಮಾರ್ ತಮ್ಮ ಕ್ಷೇತ್ರ ಕನಕಪುರದಲ್ಲಿ ಕರ್ನಾಟಕ ವನ್ ಕೇಂದ್ರವೊಂದಕ್ಕೆ ಭೇಟಿ ನೀಡಿ ಗೃಹ ಲಕ್ಷ್ಮಿ ಯೋಜನೆಗೆ (Gruha Lakshmi scheme) ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಸೆಂಟರ್ ನಲ್ಲಿ ಕೂತು ಅರ್ಜಿ ನಮೂನೆಯನ್ನು ನೋಡಿ, ನನ್ನ ಮತ್ತು ಸಿದ್ದರಾಮಯ್ಯನವರ ಫೋಟೊಗಳು ಜೊತೆಯಾಗಿ ಬರ್ಬೇಕು ಕಣ್ರಯ್ಯ, ಮೇಲೆ ಕೆಳಗೆ ಮಾಡಿದ್ದೀರಲ್ಲ ಅಂತ ಅಲ್ಲಿನ ಸಿಬ್ಬಂದಿಯೊಂದಿಗೆ ಜೋಕ್ ಮಾಡಿದರು. ಖುದ್ದು ಉಪ ಮುಖ್ಯಮಂತ್ರಿಯೇ ಸರ್ಕಾರದ ಯೋಜನೆಯೊಂದರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಖುದ್ದಾಗಿ ಅದೂ ರಜಾದಿನ ವೀಕ್ಷಿಸುವುದು ಅಭಿನಂದನಾರ್ಹ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.