AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು

ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on:Sep 14, 2026 | 12:54 PM

Share

ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.​ ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 14): ರಾಜ್ಯದ ಜನಸಾಮಾನ್ಯರಿಗೆ ಈಗ ಮತ್ತೊಂದು ಹೊಸ ಆತಂಕ ಶುರುವಾಗಿದೆ. ಮುಂಜಾನೆ 5 ಗಂಟೆಯ ಚಳಿಯಲ್ಲೂ ಹಳ್ಳಿ-ನಗರ ಎನ್ನದೆ ನ್ಯಾಯಬೆಲೆ ಅಂಗಡಿಗಳ ಮುಂದೆ ವೃದ್ಧರು, ಮಹಿಳೆಯರು ಮತ್ತು ಪುಟ್ಟ ಮಕ್ಕಳ ಸಹಿತ ಜನ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಹಾರ ಇಲಾಖೆಯು ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಡೆಡ್‌ಲೈನ್ ವಿಧಿಸಿದೆ. ಆದ್ರೆ, ಸರ್ವರ್ ಸಮಸ್ಯೆ ಇದೆ. ಹೀಗಾಗಿ ಜನರು ಆತಂಕಗೊಂಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.​ ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 14, 2026 12:28 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More