ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಸಿದ್ದರಾಮಯ್ಯ ನಿವಾಸಕ್ಕೆ ಬಂದ ಡಿಕೆ ಶಿವಕುಮಾರ್
ರಾಜ್ಯಪಾಲ ಅವರು ಮುಖ್ಯಮಂತ್ರಿಯವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ, ಅದನ್ನು ಎದುರಿಸಲು ಸರ್ಕಾರದ ಮುಂದಿರುವ ದಾರಿಗಳ್ಯಾವು ಅನ್ನೋದನ್ನು ಆಗಸ್ಟ್ 15 ರಂದು ತುಮಕೂರಲ್ಲಿ ಗೃಹ ಸಚಿವ ಜಿ ಪರಮೇಶ್ವ ರ್ ಅವರು ಕೂಲಂಕುಷವಾಗಿ ವಿವರಿಸಿದ್ದರು. ಕಾನೂನು ಹೋರಾಟ ನಡೆಸಲು ಸರ್ಕಾರಕ್ಕೆ ಅವಕಾಶವಿದೆ ಎಂದು ಅವರು ಹೇಳಿದ್ದರು.
ಬೆಂಗಳೂರು: ಬೆಂಗಳೂರಿನ ನಿವಾಸಿಗಳು ಮಜವಾಗಿ ವೀಕೆಂಡ್ ಕಳೆಯುವುದರಲ್ಲಿ ಮಗ್ನರಾಗಿದ್ದರೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜ್ಯ ಸರ್ಕಾರದಲ್ಲಿ ಗಲಿಬಿಲಿ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕರು ಪ್ರಾಸಿಕ್ಯೂಷನ್ ಅನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಎಂದು ಹೇಳುತ್ತಿರುವರಾದರೂ ಅವರಲ್ಲಿ ಆತಂಕ ಶುರುವಾಗಿರೋದು ಸುಳ್ಳಲ್ಲ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಷಯ ಗೊತ್ತಾಗುತ್ತಿದ್ದಂತೆಯೇ ಮುಖ್ಯಮಂತ್ರಿಯವರ ನಿವಾಸಕ್ಕೆ ದೌಡಾಯಿಸಿದರು. ಪ್ರಾಸಿಕ್ಯೂಷನ್ ವಿರುದ್ಧ ಯಾವ ಕ್ರಮಗಳನ್ನು ಅನುಸರಿಸಬೇಕು ಮತ್ತು ಹೇಗೆ ಪರಿಸ್ಥಿತಿಯನ್ನು ನಿಭಾಯಿಸುವುದು ಅಂತ ಅವರ ನಡುವೆ ಚರ್ಚೆ ನಡೆದಿರಬಹುದು. ಪೊಲೀಸ್ ಮಹಾ ನಿರ್ದೇಶಕ ಮತ್ತು ಇತರ ಕೆಲ ಅಧಿಕಾರಿಗಳು ಸಹ ಮುಖ್ಯಮಂತ್ರಿಯವರ ಭೇಟಿಗೆ ಆಗಮಿಸಿದರು. ಏತನ್ಮಧ್ಯೆ, ಮುಖ್ಯಮಂತ್ರಿಯವರು ಇಂದು ಸಾಯಂಕಾಲ ಕರೆದಿದ್ದ ತುರ್ತು ಸಚಿವ ಸಂಪುಟ ಸಭೆ ರದ್ದಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ಗೆ ಅನುಮತಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿವೈ ವಿಜಯೇಂದ್ರ ಆಗ್ರಹ