ಕಾಕ್ರೋಚ್ ಜನತಾ ಪಕ್ಷದ ‘ಚಲೋ ಸಂಸತ್’ ಮೆರವಣಿಗೆಗೆ ನಿರ್ಬಂಧ, ದಿಲ್ಲಿ ಪೊಲೀಸ್ ಖಡಕ್ ಎಚ್ಚರಿಕೆ

Updated on: Jul 19, 2026 | 10:51 PM

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ 'ಚಲೋ ಸಂಸದ್' ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ 'ಚಲೋ ಸಂಸದ್' ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ ಯಾವುದೇ ಅನುಮತಿಯನ್ನು ನೀಡಲಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ನವದೆಹಲಿ, (ಜುಲೈ 19): ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ ಯಾವುದೇ ಅನುಮತಿಯನ್ನು ನೀಡಲಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನುಮತಿಯಿಲ್ಲದೆ ಬೀದಿಗಿಳಿಯುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 19, 2026 10:47 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More