ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

Updated on: Feb 23, 2026 | 8:50 PM

ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು ವಿಂಡೋ ಕಟ್ ಮಾಡಿ ಒಳಗಡೆ ಹೋಗಿದ್ದಾನೆ. ಬಳಿಕ ಸಿಸಿಟಿವಿಗೆ ಸಂಬಂಧಿಸಿದ ವೈರ್ ಕಟ್ ಮಾಡಿದ್ದಾನೆ. ಆಗ ಒಳಗಡೆ ಅಲರಾಮ್ ಆಗಿದೆ. ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಬಂದು ನೋಡಿದಾಗ ಗೊತ್ತಾಗಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದಾಗ ಗೊತ್ತಾಗಿದೆ. ಫಿಂಗರ್ ಫ್ರಿಂಟ್ ಚೆಕ್ ಎಲ್ಲಾ ಮಾಡಿದ್ದಾರೆ. ಆರೋಪಿ ಬಂಧನಕ್ಕೆ ತಂಡ ರಚನೆ ಮಾಡಲಾಗಿದ್ದು, ಆದಷ್ಟು ಬೇಗನೆ ಅರೆಸ್ಟ್ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published on: Feb 23, 2026 08:47 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More