ದೆಹಲಿಯಲ್ಲಿ ಭೀಕರ ಅಪಘಾತ, ಹಣಕಾಸು ಸಚಿವಾಲಯದ ಅಧಿಕಾರಿ ಸಾವು, ಪತ್ನಿ ಸ್ಥಿತಿ ಗಂಭೀರ
ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಅಡಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು
ನವದೆಹಲಿ, ಸೆಪ್ಟೆಂಬರ್ 15: ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಅಪಘಾತ ಹೇಗಾಯಿತು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 15, 2025 07:41 AM