Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲ್ಯಾಂಡ್ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು
ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ.
ಸ್ವಿಟ್ಜರ್ಲ್ಯಾಂಡ್, ಜನವರಿ 01: ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್‌ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟಾನಾದಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ.
ಸ್ಫೋಟದ ನಂತರ, ಬಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ಸ್ವಿಸ್ ಪೊಲೀಸ್ ರಕ್ಷಣಾ ತಂಡಗಳು ಅವರನ್ನು ಬಾರ್‌ನಿಂದ ಸ್ಥಳಾಂತರಿಸಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿದೆ. ಬಾರ್‌ನಲ್ಲಿ ಹೊಸ ವರ್ಷದ ಮುನ್ನಾದಿನದ ಪಾರ್ಟಿ ನಡೆಯುತ್ತಿತ್ತು ಮತ್ತು ಅಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಆ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

