ಮಂಡ್ಯ: ಕೆರೆಯಲ್ಲಿ ನೂರಾರು ಮೀನುಗಳ ಮಾರಣಹೋಮ; ಆಮ್ಲಜನಕ ಕೊರತೆಯ ಶಂಕೆ
ಮಂಡ್ಯ(Mandya) ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಆಮ್ಲಜನಕದ ಕೊರತೆಯಿಂದ ಮೀನುಗಳು ಮೃತವಾಗಿರುವ ಶಂಕೆ ವ್ಯಕ್ತವಾಗಿದ್ದು, ಸಂಪೂರ್ಣ ಮಾಹಿತಿ ಸಿಗುವವರೆಗೆ ಕೆರೆಯಲ್ಲಿ ಮೀನು ಹಿಡಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಂಡ್ಯ, ಜ.05: ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ಮಂಡ್ಯ(Mandya) ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಆಮ್ಲಜನಕದ ಕೊರತೆಯಿಂದ ಮೀನುಗಳು ಮೃತವಾಗಿರುವ ಶಂಕೆ ವ್ಯಕ್ತವಾಗಿದೆ. ಮೀನು(Fish)ಗಳು ಕೆರೆಯಲ್ಲಿ ತೇಲುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಆಮ್ಲಜನಕ ಕೊರತೆಯಿಂದ ಮೀನುಗಳ ಮರಣವಾಗಿರುವ ಬಗ್ಗೆ ಶಂಕೆ ಮೂಡಿದ್ದು, ಸಂಪೂರ್ಣ ಮಾಹಿತಿ ಸಿಗುವವರೆಗೆ ಕೆರೆಯಲ್ಲಿ ಮೀನು ಹಿಡಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ