ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭಯೋತ್ಪಾದನೆಯನ್ನು ಪೋಷಿಸುವುದನ್ನು ನಿಲ್ಲಿಸದಿದ್ದರೆ ಪಾಕಿಸ್ತಾನವು ಜಾಗತಿಕ ಭೂಪಟ ಮತ್ತು ಇತಿಹಾಸದಿಂದಲೇ ನಾಮಾವಶೇಷವಾಗಲಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕ್ ಆಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ವಿಚಾರವಾಗಿ ಮಾತನಾಡುವಾಗ ಅವರು ಈ ಎಚ್ಚರಿಕೆ ನೀಡಿದರು.
ನವದೆಹಲಿ, ಮೇ 16: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ (Army Chief) ಜನರಲ್ ಉಪೇಂದ್ರ ದ್ವಿವೇದಿ (General Upendra Dwivedi) ನೆರೆರಾಷ್ಟ್ರಕ್ಕೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಸಂಚು ರೂಪಿಸುವುದನ್ನು ಮುಂದುವರಿಸುವ ಮುನ್ನ ಜಗತ್ತಿನ ಭೂಪಟ (Geography) ಮತ್ತು ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಿಕೊಳ್ಳಲಿ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ಸದಾ ಸೈನಿಕರನ್ನು ಪ್ರಚೋದಿಸುವ ಹಾಗೂ ಗಡಿಯಲ್ಲಿ ಉಗ್ರರನ್ನು ನುಸುಳಿಸುವ ಪಾಕಿಸ್ತಾನದ ಕುತಂತ್ರಕ್ಕೆ ಭಾರತ ಇನ್ನು ಮುಂದೆ ಮೌನವಾಗಿ ಕೂರುವುದಿಲ್ಲ, ಬದಲಿಗೆ ಅತ್ಯಂತ ಪ್ರಖರ ಪ್ರತ್ಯುತ್ತರ ನೀಡಲಿದೆ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.
(ವಿಡಿಯೋ ಕೃಪೆ: ಪಿಟಿಐ)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

