ನಾನು ಬಿಜೆಪಿಗೆ ವಾಪಸ್ಸಾಗುವ ಪ್ರಕ್ರಿಯೆ ಐದಾರು ತಿಂಗಳುಗಳಿಂದ ಜಾರಿಯಲ್ಲಿತ್ತು; ಜಗದೀಶ್ ಶೆಟ್ಟರ್
ತಾನು ಬಿಜೆಪಿಗೆ ವಾಪಸ್ಸು ಬರಲು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಪಾತ್ರ ನಿರ್ವಹಿಸಿರುವರೆಂದು ಶೆಟ್ಟರ್ ಹೇಳಿದರು. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಬೇಕಿದೆ, ಅದಕ್ಕಾಗಿ ಅಳಿಲು ಸೇವೆ ಸಲ್ಲಿಸಲು ತಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಬೆಂಗಳೂರು: ಕೇವಲ ಒಂಬತ್ತು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ಬಂದು ಬಿಜೆಪಿಗೆ ವಾಪಸ್ಸು ಹೋದ ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ (Jagadish Shettar) ಇಂದು ನಗರದ ಬಿಜೆಪಿ ಕಚೇರಿಯಲ್ಲಿ (BJP office) ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ತಾನು ಯಾಕೆ ವಾಪಸ್ಸು ಹೋದೆ ಅನ್ನೋದಕ್ಕೆ ಕೆಲ ಕಾರಣಗಳನ್ನು ನೀಡಿದರು. ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ನಿರ್ಮಾಣವಾಗಿ ಪ್ರಾಣ ಪ್ರತಿಷ್ಠಾಪನೆಯಾಗಿದ್ದು ಒಂದು ಪ್ರೇರಣೆಯಾಯಿತು ಅನ್ನುವ ಅರ್ಥದಲ್ಲಿ ಅವರು ಮಾತಾಡುತ್ತಾರಾದರೂ, ಘರ್ ವಾಪ್ಸಿ ಪ್ರಕ್ರಿಯೆ ಕಳೆದ 5-6 ತಿಂಗಳಿಂದ ಜಾರಿಯಲ್ಲಿತ್ತು ಎನ್ನುತ್ತಾರೆ. 1992 ರಲ್ಲಿ ಎಲ್ ಕೆ ಅಡ್ವಾಣಿ ಅವರ ರಥಯಾತ್ರೆ ಹುಬ್ಬಳ್ಳಿಗೆ ಆಗಮಿಸಿದಾಗ ಒಂದು ದೊಡ್ಡ ಸಾರ್ವಜನಿಕ ಸಭೆಯನ್ನು ಆಯೋಜಿಸಿ ಅದಕ್ಕೆ ಎಲ್ಲ ಏರ್ಪಾಟುಗಳನ್ನು ಮಾಡಿದ್ದು ತಾನೇ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ, ಅಲ್ಲದೆ ರಾಮಮಂದಿರ ನಿರ್ಮಾಣಕ್ಕೆ ಹುಬ್ಬಳ್ಳಿಯಿಂದ 2 ಕೋಟಿ ರೂ. ಗಿಂತ ಹೆಚ್ಚು ಹಣ ಸಂಗ್ರಹಿಸಿ ಕೊಟ್ಟಿದ್ದನ್ನು ಶೆಟ್ಟರ್ ಹೇಳಿದರು.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ರಾಮಮಂದಿರ ನಿರ್ಮಾಣಗೊಂಡಿದೆ, ದೇಶಕ್ಕೆ ಈಗ ಅವರಂಥ ನಾಯಕ ಅವಶ್ಯಕತೆಯಿದೆ ಎಂದು ಶೆಟ್ಟರ್ ಹೇಳಿದರು. ತಾನು ಬಿಜೆಪಿಗೆ ವಾಪಸ್ಸು ಬರಲು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಪಾತ್ರ ನಿರ್ವಹಿಸಿರುವರೆಂದು ಶೆಟ್ಟರ್ ಹೇಳಿದರು. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಬೇಕಿದೆ, ಅದಕ್ಕಾಗಿ ಅಳಿಲು ಸೇವೆ ಸಲ್ಲಿಸಲು ತಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ