ಭಕ್ತರಿಂದ ಸಂಗ್ರಹಿಸಿರುವ 3 ಲಕ್ಷ ರೂ ನೋಟುಗಳಿಂದ ಚಾಮುಂಡೇಶ್ವರಿ ದೇವಿಗೆ ಅಲಂಕಾರ

Edited By:

Updated on: Aug 16, 2024 | 3:22 PM

ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಭಕ್ತರಿಂದ ಸಂಗ್ರಹಿಸಲಾಗಿರುವ ಸುಮಾರು 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ದೇವಿಗೆ ಅಲಂಕಾರ ಮಾಡಲಾಗಿದೆ. ವಿಡಿಯೋ ನೋಡಿ.

ಮೈಸೂರು, ಆಗಸ್ಟ್​ 16: ನಾಡಿನೆಲ್ಲೆಡೆ ವರ ಮಹಾಲಕ್ಷ್ಮಿ (Varamahalakshmi Vrata) ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಪ್ರತಿ ಮನೆಗಳಲ್ಲೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ವರ ಮಹಾಲಕ್ಷ್ಮಿ ಹಬ್ಬ ಹಿನ್ನಲೆ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಭಕ್ತರಿಂದ ಸಂಗ್ರಹಿಸಲಾಗಿರುವ ಸುಮಾರು 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ದೇವಿಗೆ ಅಲಂಕಾರ ಮಾಡಲಾಗಿದೆ. ಧನಲಕ್ಷ್ಮೀ ಅಲಂಕಾರದಲ್ಲಿದ್ದ ದೇವಿ ಕಂಡು ಭಕ್ತರು ಕಣ್ತುಂಬಿಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

 

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More