ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ತಯಾರಿ ಹೀಗಿದೆ ನೋಡಿ

Updated on: Mar 16, 2024 | 7:56 PM

Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ, ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಯನ್ನು ಸಿಂಗರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ...

ಪುನೀತ್ ರಾಜ್​ಕುಮಾರ್ (Puneeth Rajkumar) ಹುಟ್ಟುಹಬ್ಬ (Birthday) ಮಾರ್ಚ್ 17 ರಂದು ನಡೆಯಲಿದೆ. ಅಪ್ಪು ಅಭಿಮಾನಿಗಳನ್ನಗಲಿ ಮೂರು ವರ್ಷಗಳಾಗುತ್ತಾ ಬಂದಿದೆ. ಆದರೆ ಅಪ್ಪು ಅಭಿಮಾನಿಗಳ ಮನದಲ್ಲಿ ಅಜರಾಮರರಾಗಿದ್ದಾರೆ. ಇದಕ್ಕೆ ಸಾಕ್ಷಿ ಅಭಿಮಾನಿಗಳಿಗೂ ಇಂದಿಗೂ ಅಪ್ಪು ಹುಟ್ಟುಹಬ್ಬವನ್ನು ಆಚರಿಸುವ ರೀತಿ. ಇಡೀ ರಾಜ್ಯದಾದ್ಯಂತ ಮಾರ್ಚ್ 17ರಂದು ಅಪ್ಪು ಅಭಿಮಾನಿಗಳು ಪುನೀತ್​ರ ಹುಟ್ಟುಹಬ್ಬವನ್ನು ಬಹು ಅದ್ಧೂರಿಯಾಗಿ ಆಚರಿಸುತ್ತಾರೆ. ಪುನೀತ್​ರ ಸಮಾಧಿಗಂತೂ ಲಕ್ಷೋಪಾದಿಯಲ್ಲಿ ಅಭಿಮಾನಿಗಳು ಆಗಮಿಸಿ ದರ್ಶನ ಪಡೆಯುತ್ತಾರೆ. ನಾಳೆ ಪುನೀತ್​ರ ಹುಟ್ಟುಹಬ್ಬಕ್ಕೆ ಕಂಠೀರವ ಸ್ಟುಡಿಯೋನಲ್ಲಿ ಅದ್ಧೂರಿಯಾಗಿ ತಯಾರಿ ಆರಂಭವಾಗಿದ್ದು, ಪುನೀತ್​ರ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More