AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್

Video: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್

ನಯನಾ ರಾಜೀವ್
|

Updated on: Sep 25, 2025 | 9:40 AM

Share

ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಅಧಿಕಾರಕ್ಕೇರಿರುವ ಬಿಜೆಪಿಗೆ ಜನಸಂಘದ ಕಾಲದಲ್ಲೇ ವೈಚಾರಿಕ ನೆಲೆಗಟ್ಟನ್ನು ರೂಪಿಸಿಕೊಟ್ಟ ಧೀಮಂತರು ಪಂಡಿತ್ ದೀನ್‌ದಯಾಳರು. ಇಂದು ಅವರ ಜನ್ಮದಿನ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್​ದೇವ ಅವರು ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನವದೆಹಲಿ, ಸೆಪ್ಟೆಂಬರ್ 25: ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಅಧಿಕಾರಕ್ಕೇರಿರುವ ಬಿಜೆಪಿಗೆ ಜನಸಂಘದ ಕಾಲದಲ್ಲೇ ವೈಚಾರಿಕ ನೆಲೆಗಟ್ಟನ್ನು ರೂಪಿಸಿಕೊಟ್ಟ ಧೀಮಂತರು ಪಂಡಿತ್ ದೀನದಯಾಳರು. ಇಂದು ಅವರ ಜನ್ಮದಿನ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್​ದೇವ ಅವರು ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರು 1916 ರಲ್ಲಿ ಮಥುರಾದಲ್ಲಿ ಜನಿಸಿದರು ಮತ್ತು 1953 ರಿಂದ 1968 ರವರೆಗೆ ಭಾರತೀಯ ಜನಸಂಘಕ್ಕೆ ಸೇವೆ ಸಲ್ಲಿಸಿದ್ದರು. ಬಿಜೆಪಿ ಸ್ಥಾಪನೆಯಾದಾಗಿನಿಂದ ಅವರು ಅದಕ್ಕೆ ಸೈದ್ಧಾಂತಿಕ ಮಾರ್ಗದರ್ಶನ ಮತ್ತು ನೈತಿಕ ಸ್ಫೂರ್ತಿಯ ಮೂಲವಾಗಿದ್ದರು. ಫೆಬ್ರವರಿ 1968 ರಲ್ಲಿ ಮುಘಲ್ಸರಾಯ್ ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ನಿಗೂಢವಾಗಿ ಸಾವನ್ನಪ್ಪಿದ್ದರು.ನಂತರ 2018 ರಲ್ಲಿ ಯುಪಿ ಸರ್ಕಾರವು ಈ ರೈಲ್ವೆ ನಿಲ್ದಾಣವನ್ನು ದೀನದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ