ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ದೀಪ್ತಿ ಶರ್ಮಾ
Deepti Sharma's T20I World Record: ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ 3-0 T20 ಸರಣಿ ಗೆದ್ದು ಬೀಗಿದೆ. ಈ ವಿಜಯದಲ್ಲಿ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ ಪಾತ್ರ ವಹಿಸಿದರು. ಅವರು 3 ವಿಕೆಟ್ ಪಡೆದು ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ 1000 ರನ್ ಹಾಗೂ 150 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಅವರ ವೃತ್ತಿಜೀವನದ ಮಹತ್ವದ ಸಾಧನೆ.
ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಭಾರತ ಮಹಿಳಾ ತಂಡ ವಶಪಡಿಸಿಕೊಂಡಿದೆ. ತಿರುವನಂತಪುರದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 8 ವಿಕೆಟ್ಗಳಿಂದ ಗೆದ್ದುಕೊಂಡಿತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ 3 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಸೃಷ್ಟಿಸಿದರು. ಇದೀಗ ದೀಪ್ತಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1000 ರನ್ ಹಾಗೂ 150 ಕ್ಕೂ ಅಧಿಕ ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಹಾಗೆಯೇ ಜಂಟಿಯಾಗಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಹಿಳಾ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ, ಕೇವಲ ಇಬ್ಬರು ಬೌಲರ್‌ಗಳು ಮಾತ್ರ 150 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರಲ್ಲಿ ಒಬ್ಬರು ಆಸ್ಟ್ರೇಲಿಯಾದ ಮೇಗನ್ ಶುಟ್, ಅವರು 123 ಪಂದ್ಯಗಳಲ್ಲಿ 151 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ದೀಪ್ತಿ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದು, 131 ಪಂದ್ಯಗಳಲ್ಲಿ 151 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ದೀಪ್ತಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದೀಪ್ತಿ 1,000 ರನ್ ಮತ್ತು 150 ವಿಕೆಟ್‌ಗಳ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.

