Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ

Updated on: May 10, 2025 | 6:38 PM

India Pakistan War Live: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯು ಹೆಚ್ಚಾಗಿದೆ. ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯಗಳು ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿವೆ. ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.ಪರಿಸ್ಥಿತಿಯು ನಿರಂತರವಾಗಿ ಬದಲಾಗುತ್ತಿದೆ.

ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಯುತ್ತಿದೆ. ಭಾರತ-ಪಾಕಿಸ್ತಾನದ ನಡುವೆ ಪರಿಸ್ಥಿತಿ ದಿನದಿಂದ ದಿನಕ್ಕೆ ಉದ್ವಿಗ್ನಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತಾಗಿ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದೆ. ಇದೀಗ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಎಲ್ಲ ಇಲಾಖೆಗಳ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಶುಕ್ರವಾರ ಸಂಜೆ 6 ಗಂಟೆಗೆ ವಿದೇಶಾಂಗ, ರಕ್ಷಣಾ ಸಚಿವಾಲಯದಿಂದ ಜಂಟಿಯಾಗಿ ಮತ್ತೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ, ಕರ್ನಲ್ ಸೋಫಿಯಾ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸುದ್ದಿಗೋಷ್ಠಿ ನೇರ ಪ್ರಸಾರ ಇಲ್ಲಿದೆ ನೋಡಿ

Published on: May 10, 2025 05:56 PM