ಅಂತಾರಾಷ್ಟ್ರೀಯ ರಕ್ಷಣಾ ವಸ್ತು ಪ್ರದರ್ಶನ ಉದ್ಘಾಟನೆಗೆ ಬೆಂಗಳೂರು ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

|

Updated on: Nov 02, 2023 | 2:57 PM

ಅವರ ಆಗಮನದ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಕ್ಷಣಾ ಸಚಿವರು ವಿಮಾನ ನಿಲ್ದಾಣದಿಂದ ನೇರವಾಗಿ ರಕ್ಷಣಾ ವಸ್ತು ಪ್ರದರ್ಶನ ಆಯೋಜಿಸಲಾಗಿರುವ ನೆಲಮಂಗಲದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಕಡೆ ತೆರಳಿದರು.

ಬೆಂಗಳೂರು: ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ರಾಜಕಾರಣಿಗಳದ್ದೇ ಕಾರುಬಾರು. ದೆಹಲಿಯಿಂದಲೂ ರಾಷ್ಟ್ರನಾಯಕರು ನಗರಕ್ಕೆ ಆಗಮಿಸಿದ್ದಾರೆ. ಏರ್ಪೋರ್ಟ್ ನಿಂದ ಹೊರಬರುತ್ತಿರುವ ಈ ಗಣ್ಯವ್ಯಕ್ತಿ ಯಾರೆಂದು ಬರಿಗಣ್ಣಿಗೆ ಗೊತ್ತಾಗದು. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಇಂದು ಬೆಂಗಳೂರಲ್ಲಿ ಬಂದಿದಿಳಿದಿದ್ದಾರೆ. ನೆಲಮಂಗಲದಲ್ಲಿ ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ರಕ್ಷಣಾ ವಸ್ತು ಪ್ರದರ್ಶನ (International Defence Exhibition) ಉದ್ಘಾಟನೆಗೆ ರಾಜನಾಥ್ ಸಿಂಗ್ ಆಗಮಿಸಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಕ್ಷಣಾ ಸಚಿವರು ವಿಮಾನ ನಿಲ್ದಾಣದಿಂದ ನೇರವಾಗಿ ರಕ್ಷಣಾ ವಸ್ತು ಪ್ರದರ್ಶನ ಆಯೋಜಿಸಲಾಗಿರುವ ನೆಲಮಂಗಲದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಕಡೆ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 02, 2023 02:57 PM