AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Air Pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ

Delhi Air Pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ

ಹರೀಶ್ ಜಿ.ಆರ್​.
| Edited By: |

Updated on: Nov 16, 2024 | 2:10 PM

Share

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಸ್ಮಾಗ್ ಹಾಗೂ ಫಾಗ್​​ನಿಂದಾಗಿ ಜನರಿಗೆ ತೊಂದರೆಯಾಗಿದೆ. ಅನೇಕ ಪ್ರದೇಶಗಳ AQI ಮಟ್ಟ 450 ಕ್ಕಿಂತ ಹೆಚ್ಚು ತಲುಪಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ದಾಖಲೆಗಳನ್ನೆಲ್ಲ ಮುರಿದು ನಾಗಾಲೋಟ ಮುಂದುವರಿಸಿದೆ. ಪ್ರಸ್ತುತ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ, ಅಂದರೆ AQI (ಏರ್ ಕ್ವಾಲಿಟಿ ಇಂಡೆಕ್ಸ್) 450 ಮೀರಿದೆ. ಇದು ಅತ್ಯಂತ ಗಂಭೀರ ಎಂದು ಪರಿಗಣಿಸಲಾಗಿದೆ. ಪ್ರತಿ ವರ್ಷ ಚಳಿಗಾಲದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ಪರಿಸ್ಥಿತಿ ವಿಕೋಪಕ್ಕೆ ತಲುಪುತ್ತದೆ.

ವಾಯು ಮಾಲಿನ್ಯದ ಪ್ರಭಾವದಿಂದಾಗಿ ದೆಹಲಿಯ ಇಂಡಿಯಾ ಗೇಟ್​​ ಕೂಡ ಕಾಣಿಸದಂತಾಗಿದೆ. ‘ಟಿವಿ9’ ಪ್ರತಿನಿಧಿ ಸ್ಥಳದಿಂದ ನೀಡಿರುವ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.

ಮಾಲಿನ್ಯದ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಸರ್ಕಾರವು ಐದನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ, ಆದರೂ ಆನ್‌ಲೈನ್ ತರಗತಿಗಳು ಮುಂದುವರಿಯಲಿವೆ. ಇದಲ್ಲದೆ, ಮಾಲಿನ್ಯದಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇರುವ ಕಾರಣ ಜನರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More