Delhi Air Pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಸ್ಮಾಗ್ ಹಾಗೂ ಫಾಗ್ನಿಂದಾಗಿ ಜನರಿಗೆ ತೊಂದರೆಯಾಗಿದೆ. ಅನೇಕ ಪ್ರದೇಶಗಳ AQI ಮಟ್ಟ 450 ಕ್ಕಿಂತ ಹೆಚ್ಚು ತಲುಪಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ದೇಶದ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ದಾಖಲೆಗಳನ್ನೆಲ್ಲ ಮುರಿದು ನಾಗಾಲೋಟ ಮುಂದುವರಿಸಿದೆ. ಪ್ರಸ್ತುತ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ, ಅಂದರೆ AQI (ಏರ್ ಕ್ವಾಲಿಟಿ ಇಂಡೆಕ್ಸ್) 450 ಮೀರಿದೆ. ಇದು ಅತ್ಯಂತ ಗಂಭೀರ ಎಂದು ಪರಿಗಣಿಸಲಾಗಿದೆ. ಪ್ರತಿ ವರ್ಷ ಚಳಿಗಾಲದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ಪರಿಸ್ಥಿತಿ ವಿಕೋಪಕ್ಕೆ ತಲುಪುತ್ತದೆ.
ವಾಯು ಮಾಲಿನ್ಯದ ಪ್ರಭಾವದಿಂದಾಗಿ ದೆಹಲಿಯ ಇಂಡಿಯಾ ಗೇಟ್ ಕೂಡ ಕಾಣಿಸದಂತಾಗಿದೆ. ‘ಟಿವಿ9’ ಪ್ರತಿನಿಧಿ ಸ್ಥಳದಿಂದ ನೀಡಿರುವ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
ಮಾಲಿನ್ಯದ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಸರ್ಕಾರವು ಐದನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ, ಆದರೂ ಆನ್‌ಲೈನ್ ತರಗತಿಗಳು ಮುಂದುವರಿಯಲಿವೆ. ಇದಲ್ಲದೆ, ಮಾಲಿನ್ಯದಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇರುವ ಕಾರಣ ಜನರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ