Video: ದೆಹಲಿಯಲ್ಲಿ ಮತದಾನದ ವೇಳೆ ಬಿಜೆಪಿ-ಎಎಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ದೆಹಲಿಯ ಸೀಲಾಂಪುರದಲ್ಲಿ ನಕಲಿ ಮತದಾನ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಆಮ್ಆದ್ಮಿ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ನಾಯಕರು ಬುರ್ಖಾ ಧರಿಸಿದ ಮಹಿಳೆಯರು ಮತಗಟ್ಟೆಗಳಲ್ಲಿ ನಕಲಿ ಮತ ಚಲಾವಣೆ ಮಾಡಿದ್ದಾರೆಂದು, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ನಕಲಿ ಮತದಾನವನ್ನು ನಿಲ್ಲಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಏತನ್ಮಧ್ಯೆ, ಯಾವುದೇ ಅಕ್ರಮಗಳನ್ನು ತಡೆಗಟ್ಟಲು ಅಗತ್ಯ ಪರಿಶೀಲನಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮತಗಟ್ಟೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆರೋಪಗಳಿಗೆ ಅಧಿಕಾರಿಗಳು ಇನ್ನೂ ಪ್ರತಿಕ್ರಿಯಿಸಿಲ್ಲ.
ಇದರಿಂದಾಗಿ ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರು ಘರ್ಷಣೆ ನಡೆಸಿ ಪರಸ್ಪರ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಸ್ಥಳದಲ್ಲಿದ್ದ ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಅಲ್ಲಿಂದ ಕರೆದೊಯ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ