AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ ಪ್ರಕರಣ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ

ದೆಹಲಿ ಸ್ಫೋಟ ಪ್ರಕರಣ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ

ರಮೇಶ್ ಬಿ. ಜವಳಗೇರಾ
|

Updated on:Nov 11, 2025 | 4:24 PM

Share

ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಬಿಡ ಪ್ರದೇಶಗಳಲ್ಲಿ ಹೈಲರ್ಟ್​​ ಘೋಷಣೆ ಮಾಡಲಾಗಿದೆ. ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಪ್ರಯಾಣಿಕರಿಗೆ ವಿಶೇಷ ಸೂಚನೆಯೊಂದನ್ನು ನೀಡಿದೆ.

ಬೆಂಗಳೂರು, (ನವೆಂಬರ್ 11): ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಬಿಡ ಪ್ರದೇಶಗಳಲ್ಲಿ ಹೈಲರ್ಟ್​​ ಘೋಷಣೆ ಮಾಡಲಾಗಿದೆ. ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಪ್ರಯಾಣಿಕರಿಗೆ ವಿಶೇಷ ಸೂಚನೆಯೊಂದನ್ನು ನೀಡಿದೆ.

ಅವಧಿಗಿಂತ ಮುಂಚಿತವಾಗಿ ಆಗಮಿಸುವಂತೆ ಮನವಿ ಮಾಡಿದೆ. ತೀವ್ರ ತಪಾಸಣೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ವಿಳಂಬವಾಗಲಿದೆ. ಭದ್ರತಾ ಪರಿಶೀಲನೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೇಗ ಏರ್ಪೋರ್ಟ್‌ಗೆ ಆಗಮಿಸಿ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದರಿಂದ ನಿಮ್ಮ ಪ್ರಯಾಣಕ್ಕೂ ಅನುಕೂಲವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ ಎಂದು ಬೆಂಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.

Published on: Nov 11, 2025 04:20 PM