ದೆಹಲಿ ನಿಗೂಢ ಸ್ಫೋಟ: ಕಾರು ಸ್ಫೋಟಗೊಂಡಿದ್ದ ಸ್ಥಳ ಈಗ ಹೇಗಿದೆ ನೋಡಿ
ದೆಹಲಿಯ ಕೆಂಪುಕೋಟೆ ಸಮೀಪದ ಪ್ರಮುಖ ರಸ್ತೆಯಲ್ಲಿ ನಡೆದ ಐ20 ಕಾರ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದಿಂದ ಮೆಟ್ರೋ ಸ್ಟೇಷನ್ ಹಾಗೂ ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಕಾರು ಸ್ಫೋಟಗೊಂಡಿದ್ದ ಸ್ಥಳ ಈಗ ಹೇಗಿದೆ ಎಂಬುದನ್ನು ನೋಡೋಣ. ಪ್ರಕರಣದ ಹಿಂದಿರುವ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಇದು ಭಯೋತ್ಪಾದಕ ದಾಳಿ ಎಂಬ ಶಂಕೆ ವ್ಯಕ್ತವಾಗಿದ್ದು, ಕಾರಿನಲ್ಲಿ ಸ್ಪೋಟಕಗಳನ್ನು ತುಂಬಿಸಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ನವದೆಹಲಿ, ನವೆಂಬರ್ 11: ದೆಹಲಿಯ ಕೆಂಪುಕೋಟೆ ಸಮೀಪದ ಪ್ರಮುಖ ರಸ್ತೆಯಲ್ಲಿ ನಡೆದ ಐ20 ಕಾರ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಈ ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದಿಂದ ಮೆಟ್ರೋ ಸ್ಟೇಷನ್ ಹಾಗೂ ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಕಾರು ಸ್ಫೋಟಗೊಂಡಿದ್ದ ಸ್ಥಳ ಈಗ ಹೇಗಿದೆ ಎಂಬುದನ್ನು ನೋಡೋಣ.
ಪ್ರಕರಣದ ಹಿಂದಿರುವ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಇದು ಭಯೋತ್ಪಾದಕ ದಾಳಿ ಎಂಬ ಶಂಕೆ ವ್ಯಕ್ತವಾಗಿದ್ದು, ಕಾರಿನಲ್ಲಿ ಸ್ಪೋಟಕಗಳನ್ನು ತುಂಬಿಸಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ಇದು ಫಿದಾಯಿನ್ ದಾಳಿ ಶೈಲಿಯ ಕಾರ್ಯಾಚರಣೆ ಅಥವಾ ಆತ್ಮಾಹುತಿ ದಾಳಿ ಆಗಿರಬಹುದು ಎಂಬ ಅನುಮಾನವೂ ಮೂಡಿದೆ. ಎನ್‌ಐಎ, ಎನ್‌ಎಸ್‌ಜಿ ಮತ್ತು ಎಫ್‌ಎಸ್‌ಎಲ್ ತಂಡಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿವೆ. ಹರಿಯಾಣದ ಫರಿದಾಬಾದ್‌ನಿಂದ ಕಾರ್ ಖರೀದಿಸಿದ್ದು, ಪುಲ್ವಾಮಾದ ನಂಟು ಇರುವುದಾಗಿಯೂ ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
