AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Nov 12, 2025 | 5:33 PM

Share

ದೆಹಲಿ ರೆಡ್ ಫೋರ್ಟ್ ಬಳಿಯ ಕಾರ್ ಬ್ಲಾಸ್ಟ್ ಸ್ಥಳದಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಇದ್ದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಇದು ಗುಪ್ತಚರ ಹಾಗೂ ವ್ಯವಸ್ಥೆಯ ವೈಫಲ್ಯ ಎಂದಿರುವ ಅವರು, 13 ಜೀವಗಳು ಬಲಿಯಾದ ಈ ಘಟನೆ ಬಗ್ಗೆ ಗೃಹ ಮತ್ತು ರಕ್ಷಣಾ ಸಚಿವಾಲಯಗಳು ಹೆಚ್ಚೆಚ್ಚು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ದಾವಣಗೆರೆ, ನವೆಂಬರ್​ 12: ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್​ ಪ್ರತಿಕ್ರಿಯಿಸಿದ್ದು, ಒಂದು ತಿಂಗಳ ಹಿಂದಷ್ಟೇ ನಾನು ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಗೌರಿ ಶಂಕರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ಹೂವು-ಹಣ್ಣು ಖರೀದಿಸಿದ ಅದೇ ಸ್ಥಳದಲ್ಲಿ ಸ್ಫೋಟ ಸಂಭವಿಸಿರುವುದು ಆತಂಕಕಾರಿ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 12, 2025 05:32 PM

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More