ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 7 ವರ್ಷದ ಮಗು ಸಾವು, 12 ಜನರ ರಕ್ಷಣೆ

Updated on: Jan 28, 2025 | 8:02 AM

ದೆಹಲಿಯಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದು, 7 ವರ್ಷದ ಮಗು ಸಾವನ್ನಪ್ಪಿದೆ, ಇದುವರೆಗೆ 12 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ಬುರಾರಿಯಲ್ಲಿ ಘಟನೆ ನಡೆದಿದ್ದು, ಹೊಸದಾಗಿ ನಿರ್ಮಿಸಿದ್ದ ಕಟ್ಟಡ ಕುಸಿದಿದೆ. ಇನ್ನೂ ಹೆಚ್ಚಿನವರು ಸಿಲುಕಿರುವ ಶಂಕೆ ಇದೆ. ಐವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ದೆಹಲಿಯಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದು, 7 ವರ್ಷದ ಮಗು ಸಾವನ್ನಪ್ಪಿದೆ, ಇದುವರೆಗೆ 12 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ಬುರಾರಿಯಲ್ಲಿ ಘಟನೆ ನಡೆದಿದ್ದು, ಹೊಸದಾಗಿ ನಿರ್ಮಿಸಿದ್ದ ಕಟ್ಟಡ ಕುಸಿದಿದೆ. ಇನ್ನೂ ಹೆಚ್ಚಿನವರು ಸಿಲುಕಿರುವ ಶಂಕೆ ಇದೆ. ಐವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಬುರಾರಿಯ ಕೌಶಿಕ್ ಎನ್‌ಕ್ಲೇವ್‌ನಲ್ಲಿ ಸೋಮವಾರ ಸಂಜೆ 6. 30 ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಸಂಜೆ 6.58ಕ್ಕೆ ಘಟನೆಗೆ ಸಂಬಂಧಿಸಿದಂತೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯು ಇನ್ನೂ ಜಾರಿಯಲ್ಲಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More