ದೆಹಲಿ ನಿಗೂಢ ಸ್ಫೋಟ: ಘಟನೆಗೆ ಕಾರಣವಾದ ಕಾರಿನ ಸ್ಥಿತಿ ಹೇಗಾಗಿದೆ ವಿಡಿಯೋ ನೋಡಿ
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಫೋಟದ ತನಿಖೆ ತೀವ್ರಗೊಂಡಿದೆ. ಇದು ಉದ್ದೇಶಪೂರ್ವಕ ಸ್ಫೋಟವಲ್ಲ, ಬದಲಿಗೆ ಸ್ಫೋಟಕ ಸಾಗಿಸುವಾಗ ಸಂಭವಿಸಿರಬಹುದು ಎಂದು ದೆಹಲಿ ಪೊಲೀಸರು ಶಂಕಿಸಿದ್ದಾರೆ. ಘಟನೆಯಲ್ಲಿ 10 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎನ್‌ಐಎ ಮತ್ತು ಎನ್‌ಎಸ್‌ಜಿ ತಂಡಗಳು ಪರಿಶೀಲನೆ ನಡೆಸುತ್ತಿದ್ದು, ಉಗ್ರರ ಕೈವಾಡದ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.
ದೆಹಲಿ, ನವೆಂಬರ್ 10: ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ (blast) 10ಕ್ಕೂ ಹೆಚ್ಚು ಜನರು ಬಲಿ ಆಗಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1 ರಲ್ಲಿ ನಿಂತಿದ್ದ ಕಾರು ಏಕಾಏಕಿ ಸ್ಫೋಟವಾಗಿತ್ತು. ಸ್ಫೋಟದ ತೀವ್ರತೆಗೆ ಹಲವು ವಾಹನಗಳು ಹೊತ್ತಿ ಉರಿದಿವೆ. ಕಾರು, ಗೂಡ್ಸ್ ವಾಹನ, ಆಟೋ ಸೇರಿದಂತೆ ಹಲವು ವಾಹನಗಳು ಧಗಧಗಿಸಿವೆ. ಕಾರ್‌ನಲ್ಲಿ ಸ್ಫೋಟಕಗಳನ್ನು ಸಾಗಿಸುವಾಗ ಸಂಭವಿಸಿರಬಹುದು ಎಂದು ದೆಹಲಿ ಪೊಲೀಸರು ಮೇಲ್ನೋಟಕ್ಕೆ ಶಂಕಿಸಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಯಾಳುಗಳನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಮತ್ತು ಬಾಂಬ್ ಸ್ಕ್ವಾಡ್ ತಂಡಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿವೆ. ಉಗ್ರರ ಕೈವಾಡವಿದೆಯೇ ಅಥವಾ ಸಿಎನ್‌ಜಿ ಸ್ಫೋಟವೇ ಎಂಬ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
