ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು ನೀಡಿದ ದೆಹಲಿ ಪೊಲೀಸರು: ಎಡಿಟೆಡ್ ಎಂದ ದಿಪ್ಕೆ

Updated on: Oct 12, 2026 | 9:19 AM

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಹಮ್ಮಿಕೊಂಡಿತ್ತು. ಸಿಜೆಪಿ ಮುಖಂಡರಾದ ಅಭಿಜಿತ್ ದಿಪ್ಕೆ ಸೇರಿದಂತೆ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಅವರನ್ನು ಒಂದು ವರ್ಷ ಶಾಂತಿ ಭಂಗ ಉಂಟು ಮಾಡಬಾರದು ಎಂಬ ಷರತ್ತಿನ ಮೇಲೆ ಬಿಡುಗಡೆ ಮಾಡಿದೆ. ಪೊಲೀಸರ ವಿರುದ್ಧ ಸಿಜೆಪಿ ಕಿಡ್ನಾಪ್ ಆರೋಪ ಮಾಡಿದ್ದರೆ, ಪೊಲೀಸರು ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ.

ನವದೆಹಲಿ, ಅಕ್ಟೋಬರ್ 12: ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ, ದೆಹಲಿ ಪೊಲೀಸರು ಪ್ರತಿಭಟನೆಯನ್ನು ವಿಫಲಗೊಳಿಸಿ, ಸಿಜೆಪಿ ಮುಖಂಡರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾರನ್ನ ವಶಕ್ಕೆ ಪಡೆದಿದ್ದರು. ಪೊಲೀಸರು ತಮ್ಮನ್ನು ಕಿಡ್ನಾಪ್ ಮಾಡಿದ್ದು, ದಿಪ್ಕೆ ಅವರ ಅಜ್ಜಿ ನಿಧನರಾಗಿದ್ದರೂ ಅಂತ್ಯಕ್ರಿಯೆಗೆ ಹೋಗಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಸಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಆರೋಪಗಳನ್ನು ದೆಹಲಿ ಪೊಲೀಸರು ತಳ್ಳಿ ಹಾಕಿದ್ದಾರೆ. ಪೊಲೀಸ್ ಪಿಆರ್‌ಒ, ಡಿಸಿಪಿ ನೇಹಾ ಯಾದವ್, ದೀಪ್ಕೆ ಅವರ ಅಜ್ಜಿಯ ನಿಧನದ ಸುದ್ದಿಯನ್ನು ಪೊಲೀಸರು ಸೌಜನ್ಯದಿಂದ ತಿಳಿಸಿ, ಕುಟುಂಬದೊಂದಿಗೆ ಮಾತನಾಡಲು ಫೋನ್ ಕರೆ ಹಾಗೂ ಊರಿಗೆ ಹೋಗಲು ವಿಮಾನ,ರೈಲು ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದ ಮಾನವೀಯ ನೆರವಿನ ವಿಡಿಯೋ ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಎಡಿಟೆಡ್ ಎಂದು ದಿಪ್ಕೆ ಪ್ರತಿಕ್ರಿಯಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್, ಒಂದು ವರ್ಷದವರೆಗೆ ಶಾಂತಿಭಂಗ ಉಂಟು ಮಾಡಬಾರದು ಎಂಬ ಷರತ್ತಿನ ಮೇಲೆ ಸಿಜೆಪಿ ಮುಖಂಡರನ್ನು ಬಿಡುಗಡೆ ಮಾಡಿದೆ. ಆದರೂ, ಸಿಜೆಪಿ ಮತ್ತೊಂದು ಪ್ರತಿಭಟನೆಗೆ ಮುಂದಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More