ದೆಹಲಿ ಚುನಾವಣೆ ಫಲಿತಾಂಶ: ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ
Delhi election result Arvind Kejriwal First reaction: ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರವಿಂದ ಕೇಜ್ರಿವಾಲ್ ಹೇಳಿದ್ದೇನು? ಚುನಾವಣೆ ಸೋಲಿನ ಬಗ್ಗೆ ಅವರ ಮಾತುಗಳೇನು ಎಂಬುದನ್ನು ವಿಡಿಯೋದಲ್ಲಿ ನೋಡಿ.
ನವದೆಹಲಿ, ಫೆಬ್ರವರಿ 8: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕಾಗಿರುವ ಸೋಲನ್ನು ಒಪ್ಪಿಕೊಂಡಿರುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅವರು, ನಾವು ಅತ್ಯಂತ ನಮ್ರತೆಯಿಂದ ಜನರ ಆದೇಶವನ್ನು ಸ್ವೀಕರಿಸುತ್ತೇವೆ. ಈ ಗೆಲುವಿಗೆ ಬಿಜೆಪಿಯನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಇಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಜನರ ಆದೇಶವನ್ನು ನಾವು ವಿನಮ್ರತೆಯಿಂದ ತಲೆಬಾಗಿ ಸ್ವೀಕರಿಸುತ್ತೇವೆ. ಜನಾದೇಶಕ್ಕಾಗಿ ಮತ್ತು ಈ ಗೆಲುವಿಗಾಗಿ ಬಿಜೆಪಿಯನ್ನು ಅಭಿನಂದಿಸುತ್ತೇನೆ. ಜನರು ಅನೇಕ ಭರವಸೆಗಳನ್ನು ಇಟ್ಟುಕೊಂಡು ಅವರಿಗೆ ಬಹುಮತ ನೀಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಾವು ಶಿಕ್ಷಣ ಆರೋಗ್ಯ ಕುಡಿಯುವ ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡಿದ್ದೇವೆ. ದೆಹಲಿಯ ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ಇದೀಗ ಜನ ಆದೇಶ ನೀಡಿದ್ದಾರೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯನಿರ್ವಹಿಸಲಿದ್ದೇವೆ. ಜನರ ಸುಖ ದುಃಖಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಾಗಿದೆ. ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಅರವಿಂದ್ ಕ್ರೇಜಿವಾಲ್ಗೆ ಸೋಲು, ಎಎಪಿ ವರಿಷ್ಠಗೆ ಭಾರೀ ಮುಖಭಂಗ
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ