ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಅಪಾಯಮಟ್ಟ ಮೀರಿ ಹರಿಯುತ್ತಿದ್ದಾಳೆ ಯಮುನೆ, ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಹರೀಶ್ ಜಿ.ಆರ್​. ನವದೆಹಲಿ
| Updated By: ಆಯೇಷಾ ಬಾನು

Updated on: Jul 13, 2023 | 2:57 PM

ಯಮುನಾ ಪ್ರವಾಹದಿಂದ ದೆಹಲಿ ಮುಳುಗುತ್ತಿದೆ. ನದಿ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿ ಪಾತ್ರ, ತಗ್ಗು ಪ್ರದೇಶದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.

ಉತ್ತರಭಾರತದಲ್ಲಿ ಮಳೆ ಅಬ್ಬರಿಸ್ತಿದೆ. ವರ್ಣಾರ್ಭಟಕ್ಕೆ‌ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹದಿಂದಾಗಿ ಹಿಮಾಚಲ ಪ್ರದೇಶದಿಂದ, ಉತ್ತರಾಖಂಡ, ಹರಿಯಾಣ ದೆಹಲಿವರೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ಕಡಿಮೆಯಾಗಿಲ್ಲ. ಭೂಕುಸಿತ, ಮನೆ ಕುಸಿತದ ಹಲವು ಘಟನೆಗಳು ಸಮಭವಿಸುತ್ತವೆ ಇದೆ. ಸಾಕಷ್ಟು ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ಶಿಮ್ಲಾದ ಭಟ್ಟಾಕುಫರ್ ಹಣ್ಣಿನ ಮಾರುಕಟ್ಟೆಯಲ್ಲಿ ಭೂಕುಸಿತ ಸಂಭವಿಸಿದೆ. ಮಣಿಕರ್ಣ ಮತ್ತು ಕಸೋಲ್‌ನಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಯಮುನಾ ಪ್ರವಾಹದಿಂದ ದೆಹಲಿ ಮುಳುಗುತ್ತಿದೆ. ನದಿ ಸುತ್ತಮುತ್ತಲಿನ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ನದಿ ಪಾತ್ರ, ತಗ್ಗು ಪ್ರದೇಶದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಈವರೆಗೂ 16,564 ಜನರನ್ನ ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.