AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್ ವರ್ಮಾ

ವಿಡಿಯೋ: ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್ ವರ್ಮಾ

ನಯನಾ ರಾಜೀವ್
|

Updated on:Sep 28, 2026 | 7:29 AM

Share

ದೆಹಲಿ ಲೋಕೋಪಯೋಗಿ ಇಲಾಖೆ (PWD) ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ನಡೆದಿದ್ದು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (AAP) ನಾಯಕರ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ ತಳ್ಳಿದ ನಂತರ ಅವರ ಕೆನ್ನೆಗೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸುತ್ತದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 27: ದೆಹಲಿ ಲೋಕೋಪಯೋಗಿ ಇಲಾಖೆ (PWD) ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ನಡೆದಿದ್ದು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (AAP) ನಾಯಕರ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ ತಳ್ಳಿದ ನಂತರ ಅವರ ಕೆನ್ನೆಗೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸುತ್ತದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಘಟನೆಯ ಬಳಿಕ ಪರ್ವೇಶ್ ವರ್ಮಾ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ಆ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಿಂದ ತಾವು ಪ್ರತಿಕ್ರಿಯಿಸಿದ್ದಾಗಿ ಅವರು ಹೇಳಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎಎಪಿ ಶಾಸಕ ಜರ್ನೈಲ್ ಸಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದರು. ರಸ್ತೆಯ ಮೇಲಿನ ಡಾಂಬರನ್ನು ಕೈಯಿಂದಲೇ ಕಿತ್ತು ತೋರಿಸಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು. ಬಳಿಕ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡು ಸಚಿವರ ವಿರುದ್ಧ ಟೀಕೆ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Sep 28, 2026 07:11 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More