ವಿಡಿಯೋ: ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್ ವರ್ಮಾ
ದೆಹಲಿ ಲೋಕೋಪಯೋಗಿ ಇಲಾಖೆ (PWD) ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ನಡೆದಿದ್ದು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (AAP) ನಾಯಕರ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ ತಳ್ಳಿದ ನಂತರ ಅವರ ಕೆನ್ನೆಗೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸುತ್ತದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ನವದೆಹಲಿ, ಸೆಪ್ಟೆಂಬರ್ 27: ದೆಹಲಿ ಲೋಕೋಪಯೋಗಿ ಇಲಾಖೆ (PWD) ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ನಡೆದಿದ್ದು, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ (AAP) ನಾಯಕರ ನಡುವೆ ತೀವ್ರ ವಾಗ್ವಾದಕ್ಕೂ ಕಾರಣವಾಗಿದೆ. ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ ತಳ್ಳಿದ ನಂತರ ಅವರ ಕೆನ್ನೆಗೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಕಾಣಿಸುತ್ತದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಘಟನೆಯ ಬಳಿಕ ಪರ್ವೇಶ್ ವರ್ಮಾ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ಆ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಿಂದ ತಾವು ಪ್ರತಿಕ್ರಿಯಿಸಿದ್ದಾಗಿ ಅವರು ಹೇಳಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎಎಪಿ ಶಾಸಕ ಜರ್ನೈಲ್ ಸಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದರು. ರಸ್ತೆಯ ಮೇಲಿನ ಡಾಂಬರನ್ನು ಕೈಯಿಂದಲೇ ಕಿತ್ತು ತೋರಿಸಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು. ಬಳಿಕ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡು ಸಚಿವರ ವಿರುದ್ಧ ಟೀಕೆ ಮಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ