ಅಪ್ಪ ಕ್ರಿಮಿನಲ್ ಅಲ್ಲ, ದೇಶ ಕಾಯುವ ಸೈನಿಕ: ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ

Updated on: Jul 31, 2026 | 12:19 PM

ದೆಹಲಿಯ ಜಂತರ್ ಮಂತರ್ ಬಳಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗಂಭೀರವಾಗಿ ಗಾಯಗೊಂಡ ದೆಹಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (SI) ಅವರ ಮಗಳು, ತಮ್ಮ ತಂದೆಗೆ ನ್ಯಾಯ ಒದಗಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಲತಾಣಗಳಲ್ಲಿ ತಮ್ಮ ತಂದೆಯನ್ನು ‘ಕ್ರಿಮಿನಲ್’ ಎಂದು ಬಿಂಬಿಸುತ್ತಿರುವುದಕ್ಕೆ ಆಕೆ ತೀವ್ರ ಆಕ್ರೋಶ ಹಾಗೂ ನೋವು ವ್ಯಕ್ತಪಡಿಸಿದ್ದಾರೆ. "ನನ್ನ ತಂದೆ ದೆಹಲಿ ಪೊಲೀಸ್ ಇಲಾಖೆಗೆ ಸೇರುವ ಮೊದಲು ಭಾರತೀಯ ನೌಕಾಪಡೆಯಲ್ಲಿ 'ಮರೀನ್ ಕಮಾಂಡೋ' (MARCOS) ಆಗಿ 15 ವರ್ಷಗಳ ಕಾಲ ದೇಶ ಸೇವೆ ಮಾಡಿದ್ದಾರೆ.

ನವದೆಹಲಿ, ಜುಲೈ 31: ದೆಹಲಿಯ ಜಂತರ್ ಮಂತರ್ ಬಳಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗಂಭೀರವಾಗಿ ಗಾಯಗೊಂಡ ದೆಹಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (SI) ಅವರ ಮಗಳು, ತಮ್ಮ ತಂದೆಗೆ ನ್ಯಾಯ ಒದಗಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಲತಾಣಗಳಲ್ಲಿ ತಮ್ಮ ತಂದೆಯನ್ನು ‘ಕ್ರಿಮಿನಲ್’ ಎಂದು ಬಿಂಬಿಸುತ್ತಿರುವುದಕ್ಕೆ ಆಕೆ ತೀವ್ರ ಆಕ್ರೋಶ ಹಾಗೂ ನೋವು ವ್ಯಕ್ತಪಡಿಸಿದ್ದಾರೆ. “ನನ್ನ ತಂದೆ ದೆಹಲಿ ಪೊಲೀಸ್ ಇಲಾಖೆಗೆ ಸೇರುವ ಮೊದಲು ಭಾರತೀಯ ನೌಕಾಪಡೆಯಲ್ಲಿ ‘ಮರೀನ್ ಕಮಾಂಡೋ’ (MARCOS) ಆಗಿ 15 ವರ್ಷಗಳ ಕಾಲ ದೇಶ ಸೇವೆ ಮಾಡಿದ್ದಾರೆ.

ಅವರು ಜಂತರ್ ಮಂತರ್‌ನಲ್ಲಿ ಕಟ್ಟುನಿಟ್ಟಿನ ಭದ್ರತಾ ಕರ್ತವ್ಯದಲ್ಲಿದ್ದರು” ಎಂದು ಹೇಳಿದ್ದಾರೆ. ತಂದೆ ರಾತ್ರಿ ಮನೆಗೆ ಬಂದಾಗ, ಇದು ಕೇವಲ ವಿದ್ಯಾರ್ಥಿ ಪ್ರತಿಭಟನೆಯಂತೆ ಕಾಣುತ್ತಿಲ್ಲ, ಇದರ ಹಿಂದೆ ಹಲವು ಸಮಾಜಘಾತಕ ಶಕ್ತಿಗಳು ಕೈಜೋಡಿಸಿವೆ ಎಂದು ಆಗಾಗ ಹೇಳುತ್ತಿದ್ದರು ಎಂದು ಆಕೆ ನೆನಪಿಸಿಕೊಂಡಿದ್ದಾರೆ.

ಜುಲೈ 25 ರಂದು ಮಧ್ಯಾಹ್ನ ಸುಮಾರು 7 ಗಂಟೆಯ ವೇಳೆಗೆ ಜಂತರ್ ಮಂತರ್ ಸ್ಟೇಜ್ ಬಳಿ ರೊಚ್ಚಿಗೆದ್ದ ಉಗ್ರ ಗುಂಪೊಂದು ಎಸ್‌ಐ ಅವರನ್ನು ಎಳೆದಾಡಿ, ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ತಂದೆಯನ್ನೇ ಕ್ರಿಮಿನಲ್ ಎಂದು ಕರೆಯಲಾಗುತ್ತಿದೆ ಹಾಗೂ ಆತನ ಮೇಲೆ ಹಲ್ಲೆ ಮಾಡಿದವರೇ ಸುಪ್ರೀಂ ಕೋರ್ಟ್‌ಗೆ ತೆರಳಿ ಪೊಲೀಸರ ವಿರುದ್ಧ ದೂರು ನೀಡಲು ಯತ್ನಿಸುತ್ತಿದ್ದಾರೆ ಎಂಬ ವಿಷಯ ತಿಳಿದು ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More