AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ

ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ

ಸುಷ್ಮಾ ಚಕ್ರೆ
|

Updated on: Aug 08, 2026 | 11:19 PM

Share

ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜಲಪ್ರಳಯದ ವಾತಾವರಣವನ್ನು ಸೃಷ್ಟಿಸಿದೆ. ದಕ್ಷಿಣ ದೆಹಲಿಯ ದೇವ್ಲಿ ಪ್ರದೇಶದಲ್ಲಿ ಭಾರೀ ಮಳೆಗೆ ಪಾರ್ಕಿಂಗ್ ಸ್ಥಳದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗೋಡೆಯ ಬದಿ ನಿಲ್ಲಿಸಲಾಗಿದ್ದ 8 ಕಾರುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ದೇವ್ಲಿ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪಾರ್ಕಿಂಗ್ ಆವರಣದ ತಡೆಗೋಡೆಯ ತಳಭಾಗ ನೀರು ತುಂಬಿ ದುರ್ಬಲಗೊಂಡಿತ್ತು. ಇಂದು ಮಧ್ಯಾಹ್ನ ಗೋಡೆ ದಿಢೀರನೆ ಕುಸಿದು ಬಿದ್ದು, ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ವಾಹನಗಳ ಮೇಲೆ ಬಿದ್ದಿದೆ.

ನವದೆಹಲಿ, ಆಗಸ್ಟ್ 8: ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜಲಪ್ರಳಯದ ವಾತಾವರಣವನ್ನು ಸೃಷ್ಟಿಸಿದೆ. ದಕ್ಷಿಣ ದೆಹಲಿಯ (Delhi Rains) ದೇವ್ಲಿ ಪ್ರದೇಶದಲ್ಲಿ ಭಾರೀ ಮಳೆಗೆ ಪಾರ್ಕಿಂಗ್ ಸ್ಥಳದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗೋಡೆಯ ಬದಿ ನಿಲ್ಲಿಸಲಾಗಿದ್ದ 8 ಕಾರುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ದೇವ್ಲಿ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪಾರ್ಕಿಂಗ್ ಆವರಣದ ತಡೆಗೋಡೆಯ ತಳಭಾಗ ನೀರು ತುಂಬಿ ದುರ್ಬಲಗೊಂಡಿತ್ತು. ಇಂದು ಮಧ್ಯಾಹ್ನ ಗೋಡೆ ದಿಢೀರನೆ ಕುಸಿದು ಬಿದ್ದು, ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ವಾಹನಗಳ ಮೇಲೆ ಬಿದ್ದಿದೆ.

ಕುಸಿದ ಗೋಡೆಯ ಇಟ್ಟಿಗೆ ಮತ್ತು ಕಾಂಕ್ರೀಟ್ ಚೂರುಗಳು ಬಿದ್ದ ರಭಸಕ್ಕೆ 8 ಕಾರುಗಳ ಮೇಲ್ಛಾವಣಿ ಹಾಗೂ ಮುಂಭಾಗ ನಜ್ಜುಗುಜ್ಜಾಗಿದ್ದು, ತೀವ್ರ ಹಾನಿ ಸಂಭವಿಸಿದೆ. ಘಟನೆ ನಡೆದ ಸಮಯದಲ್ಲಿ ಕಾರುಗಳ ಒಳಗೆ ಅಥವಾ ಗೋಡೆಯ ಪಕ್ಕದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಜನರಿಗೆ ಗಾಯಗಳಾದ ವರದಿಯಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us