AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ ಪ್ರಕರಣ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ

ದೆಹಲಿ ಸ್ಫೋಟ ಪ್ರಕರಣ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ

ಸುಷ್ಮಾ ಚಕ್ರೆ
|

Updated on: Nov 11, 2025 | 10:06 PM

Share

ದೆಹಲಿಯ ಕೆಂಪು ಕೋಟೆ ಬಳಿ ಇರುವ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸೋಮವಾರ ಸಂಜೆ ಹುಂಡೈ ಐ20 ಕಾರು ಸ್ಫೋಟಗೊಂಡಿತ್ತು. ಇದರಿಂದ 10 ಜನರು ಸಾವನ್ನಪ್ಪಿದ್ದರು, ಹಲವಾರು ಜನರು ಗಾಯಗೊಂಡಿದ್ದರು. ಈಗಾಗಲೇ ಕಾಶ್ಮೀರ-ಫರಿದಾಬಾದ್-ದೆಹಲಿ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಖಾಜಿಗುಂಡ್‌ನ ಡಾ. ಅದೀಲ್ ಅಹ್ಮದ್ ರಾಥರ್, ಪುಲ್ವಾಮಾದ ಡಾ. ಮುಜಮ್ಮಿಲ್ ಅಹ್ಮದ್ ಗನೈ ಮತ್ತು ಡಾ. ಶಾಹೀನ್ ಸಯೀದ್ ಎಂಬ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕಾಶ್ಮೀರದಲ್ಲಿ ಪುಲ್ವಾಮಾದ ಸಂಬೂರಾದ ತಾರಿಕ್ ಅಹ್ಮದ್ ದಾರ್ ಮತ್ತು ಉಮರ್ ಅಲಿಯಾಸ್ ಅಮೀರ್ ಅವರನ್ನು ಬಂಧಿಸಲಾಗಿದೆ.

ನವದೆಹಲಿ, ನವೆಂಬರ್ 11: ದೆಹಲಿಯ ಕೆಂಪು ಕೋಟೆಯ ಮೆಟ್ರೋ ಸ್ಟೇಷನ್ ಬಳಿ ಉಂಟಾದ ಕಾರು ಸ್ಫೋಟ (Delhi Car Blast) ಪ್ರಕರಣಕ್ಕೆ ಹಲವು ತಿರುವುಗಳು ಉಂಟಾಗಿವೆ. ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಕೈಗೆತ್ತಿಕೊಂಡಿದೆ. ಇದರ ನಡುವೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಂತ್ರಸ್ತರ ಕುಟುಂಬಗಳಿಗೆ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಕಾರು ಸ್ಫೋಟದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ 10 ಲಕ್ಷ ರೂ., ಶಾಶ್ವತ ಅಂಗವಿಕಲರಾದವರಿಗೆ 5 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.

ಈಗಾಗಲೇ ಕಾಶ್ಮೀರ-ಫರಿದಾಬಾದ್-ದೆಹಲಿ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಖಾಜಿಗುಂಡ್‌ನ ಡಾ. ಅದೀಲ್ ಅಹ್ಮದ್ ರಾಥರ್, ಪುಲ್ವಾಮಾದ ಡಾ. ಮುಜಮ್ಮಿಲ್ ಅಹ್ಮದ್ ಗನೈ ಮತ್ತು ಡಾ. ಶಾಹೀನ್ ಸಯೀದ್ ಎಂಬ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕಾಶ್ಮೀರದಲ್ಲಿ ಪುಲ್ವಾಮಾದ ಸಂಬೂರಾದ ತಾರಿಕ್ ಅಹ್ಮದ್ ದಾರ್ ಮತ್ತು ಉಮರ್ ಅಲಿಯಾಸ್ ಅಮೀರ್ ಅವರನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ