Delhi Blast: ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್
ನವದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಹಲವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ಸಂಬಂಧ ದೆಹಲಿ ಮಾತ್ರವಲ್ಲದೇ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ನವದೆಹಲಿ, (ನವೆಂಬರ್ 10): ನವದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದೀಗ ಬಂದ ಮಾಹಿತಿ ಪ್ರಕಾರ ದುರಂತದಲ್ಲಿ 9 ಜನ ಸಾವನ್ನಪ್ಪಿದ್ದು, ಸ್ಫೋಟದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ಸಂಬಂಧ ದೆಹಲಿ ಮಾತ್ರವಲ್ಲದೇ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ ಓರ್ವ ಸಾವು; ದೆಹಲಿಯಲ್ಲಿ ಹೈ ಅಲರ್ಟ್
ಈ ಬಗ್ಗೆ ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಅಧೀಕ್ಷಕ ಪ್ರತಿಕ್ರಿಯಿಸಿದ್ದು, ಹದಿನೈದು ಜನರನ್ನು ಲೋಕ ನಾಯಕ ಆಸ್ಪತ್ರೆಗೆ ಕರೆತಂದಿದ್ದು, ಈ ಪೈಕಿ ಎಂಟು ಜನ ಆಸ್ಪತ್ರೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ. ಮೂವರು ಸ್ಥಿತಿ ಗಂಭೀರವಾಗಿದ್ದು, ಒಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Published on: Nov 10, 2025 08:17 PM
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

