Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

Updated on: Mar 30, 2026 | 9:26 AM

ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು.

ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕಿಯ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸಿದ್ದಾರೆ.ಅಪರಾಧ ಎಸಗಿದ ವಾಹನದ ಮೇಲೆ ಅಪಾಯಕಾರಿ ಚಾಲನೆ ಮತ್ತು ಕಾನೂನು ಉಲ್ಲಂಘನೆಗಾಗಿ ಮೋಟಾರ್‌ಸೈಕಲ್ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More